ಓಬಿಸಿ, ಎಸ್‍ಸಿ, ಎಸ್‍ಟಿ ಮೀಸಲಾತಿ ಸಂರಕ್ಷಣಾ ಸಮಿತಿ ಪ್ರತಿಭಟನೆ
ಮೈಸೂರು

ಓಬಿಸಿ, ಎಸ್‍ಸಿ, ಎಸ್‍ಟಿ ಮೀಸಲಾತಿ ಸಂರಕ್ಷಣಾ ಸಮಿತಿ ಪ್ರತಿಭಟನೆ

October 4, 2018

ಮೈಸೂರು:  ಪಿಯುಸಿ ಉಪ ನ್ಯಾಸಕರ ನೇಮಕಾತಿಯಲ್ಲಿ ಎಸ್‍ಸಿ, ಎಸ್‍ಟಿ, ಓಬಿಸಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯ ಶೇಕಡವಾರು ಅಂಕವನ್ನು ಶೇ.55ಕ್ಕೆ ಹೆಚ್ಚಿಸಿ ರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಓಬಿಸಿ, ಎಸ್‍ಸಿ ಮತ್ತು ಎಸ್‍ಟಿ ಮೀಸ ಲಾತಿ ಸಂರಕ್ಷಣಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ರೋಸ್ಟರ್ ಪದ್ಧತಿಯನ್ನು ಸರ್ಕಾರ ಗಾಳಿಗೆ ತೂರಿದೆ ಎಂದು ಆರೋಪಿಸಿದರು.

2015ರ ಶೈಕ್ಷಣಿಕ ಸಾಲಿನಲ್ಲಿ ಸಮಾರು 1069 ಖಾಲಿ ಇದ್ದ ಪಿಯು ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ವಿವಿಧ ವಿಷಯ ವಾರು ನೇಮಕಾತಿ ಪ್ರಕ್ರಿಯೆ ಆರಂಭಿಸ ಲಾಗಿತ್ತು. ಆದರೆ ಈ ಪ್ರಕ್ರಿಯೆಯನ್ನು ಅನೇಕ ಕಾರಣಗಳ ನೆಪವೊಡ್ಡಿ ಮುಂದೂಡಲಾಗು ತ್ತಿದೆ. ಜೊತೆಗೆ ನೇಮಕಾತಿಗೆ ಸಂಬಂಧಿಸಿ ದಂತೆ ಶೈಕ್ಷಣಿಕ ಅರ್ಹತೆಗೆ ಅಗತ್ಯವಿರುವ ಅಂಕಗಳನ್ನು ಶೇ.55ಕ್ಕೆ ಹೆಚ್ಚಳ ಮಾಡ ಲಾಗಿದೆ. ಆ ಮೂಲಕ ರಾಜ್ಯ ಸರ್ಕಾರ ಮೀಸಲಾತಿ ವಿರೋಧಿ ನೀತಿ ಅನುಸ ರಿಸುತ್ತಿದೆ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿ ಗಳ ಕನಿಷ್ಠ ಅರ್ಹತೆಯ ಅಂಕಗಳನ್ನು ಶೇ. 50ರಿಂದ ಶೇ.55ಕ್ಕೆ ಈ ಹಿಂದೆಯೇ ಹೆಚ್ಚಿಸ ಲಾಗಿತ್ತು. ಇದರ ವಿರುದ್ಧ ಪ್ರತಿಭಟನೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಶೇ.50ಕ್ಕೆ ಇಳಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಶೇ.55ಕ್ಕೆ ಹೆಚ್ಚಿಸಿದೆ. ಕೂಡಲೇ ಶೇ.50ಕ್ಕೆ ಇಳಿಸಲು ಮುಂದಾಗಬೇಕು. ಜೊತೆಗೆ ಪಿಯು ಉಪ ನ್ಯಾಸಕರ ನೇಮಕಾತಿ ಪ್ರಕ್ರಿಯೆ ಕಳೆದ 3 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಶೀಘ್ರ ವಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸಿದರು. ಸಮಿತಿಯ ಅಧ್ಯಕ್ಷ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಪ್ರವೀಣ್, ಉಪಾಧ್ಯಕ್ಷ ಪಾರ್ಥ, ಸಿದ್ದರಾಜು, ಗೋಪಾಲ್, ರಾಜೇಶ್, ಸಾಗರ್ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »