ಕಾಂಗ್ರೆಸ್ ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ
ಮೈಸೂರು

ಕಾಂಗ್ರೆಸ್ ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ

October 24, 2021

ಮೈಸೂರು,ಅ.23(ಎಂಟಿವೈ)-ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಬಗ್ಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕ ದ್ದಮೆ ದಾಖಲಿಸಲಾಗು ವುದು ಎಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಧೀರಜ್ ಪ್ರಸಾದ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ಧ ನೀಡಿರುವ ಹೇಳಿಕೆ ತೀವ್ರ ಖಂಡನೀಯ. ಬಿಜೆಪಿಯಲ್ಲಿ ಅಧ್ಯಕ್ಷರಿಗೆ ವಿಶೇಷವಾದ ಗೌರವವಿದೆ. ಕೋಟ್ಯಾಂತರ ಕಾರ್ಯಕರ್ತರ ಗೌರವ ಪಡೆದಿರುವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರನ್ನು ಅಸಂಬದ್ಧ ಹೇಳಿಕೆಗಳಿಂದ ಟೀಕಿಸುವುದನ್ನು ಲಕ್ಷ್ಮಣ್ ನಿಲ್ಲಿಸಬೇಕು ಎಂದು ಆಗ್ರಹಿಸಿ ದರು. ಕಟೀಲ್ ಅವರು ರಾಹುಲ್ ಗಾಂಧಿ ಬಗ್ಗೆ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ಲಕ್ಷ್ಮಣ್ ಅವರು ರಾಜಕೀಯ ನೆಲೆಯನ್ನು ಕಂಡುಕೊಳ್ಳಲು ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಕಿರಣ್ ಗೌಡ ಮಾತನಾಡಿ, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ನಿಂದಿಸಿದರೆ ಹೆಚ್ಚು ಪ್ರಚಾರ ಸಿಗಲಿದೆ ಎಂಬ ಭ್ರಮೆಯಲ್ಲಿದ್ದಾರೆ. ಈ ರೀತಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿ ರಾಜ್ಯದಲ್ಲಿ ಒಂದು ಸೀಟ್‍ಗೆ ಇಳಿದಿದ್ದೀರಿ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶೂನ್ಯ ಸಂಪಾದನೆ ಮಾಡಬೇಕೆಂಬ ಆಸೆಯಿದ್ದರೆ ಇದೇ ರೀತಿ ಟೀಕಿಸುತ್ತೀರಿ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ವಿ.ಸೋಮಸುಂದರ, ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಜಯಶಂಕರ್, ಮಹೇಶ್‍ರಾಜೇ ಅರಸ್, ಪ್ರದೀಪ್‍ಕುಮಾರ್ ಉಪಸ್ಥಿತರಿದ್ದರು.

Translate »