ನಾಳೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಮೈಸೂರು ಪ್ರವಾಸ
ಮೈಸೂರು

ನಾಳೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಮೈಸೂರು ಪ್ರವಾಸ

January 28, 2021

ಮೈಸೂರು,ಜ.27(ಪಿಎಂ)-ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ (ಕೋಟೆ) ಜ.29ರಂದು ಮೈಸೂರು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜ.28ರಂದು ಸಂಜೆ 4ಕ್ಕೆ ಬೆಂಗಳೂರು ನಿರ್ಗಮಿಸುವ ಎಂ.ಶಿವಣ್ಣ, ಸಂಜೆ 6.30ಕ್ಕೆ ಮೈಸೂ ರಿಗೆ ಆಗಮಿಸಿ, ಜಲದರ್ಶಿನಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜ.29ರಂದು ಬೆಳಗ್ಗೆ 9ಕ್ಕೆ ಮಂಡಿ ಮೊಹಲ್ಲಾದ ಬಿಬಿ ಕಾಲೋನಿ ಹಾಗೂ ಸಿವಿ ರಸ್ತೆಯ ಪೌರಕಾರ್ಮಿಕರ ಕಾಲೋನಿಗೆ ಭೇಟಿ ನೀಡ ಲಿದ್ದಾರೆ. ಬಳಿಕ ಬೆಳಗ್ಗೆ 11ಕ್ಕೆ ಸಫಾಯಿ ಕರ್ಮಚಾರಿ ಶ್ರೇಯೋಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 12.30ಕ್ಕೆ ಜಲದರ್ಶಿನಿ ಅತಿಥಿಗೃಹದಲ್ಲಿ ಪೌರಕಾರ್ಮಿಕರ ಮುಖಂಡರೊಂದಿಗೆ ಚರ್ಚೆ ನಡೆಸಲಿ ದ್ದಾರೆ. ಮಧ್ಯಾಹ್ನ 3ಕ್ಕೆ ಮಹಾನಗರ ಪಾಲಿಕೆಯಲ್ಲಿ ಹಮ್ಮಿಕೊಂಡಿರುವ ಪೌರಕಾರ್ಮಿಕರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮೈಸೂರಿನಲ್ಲಿ ವಾಸ್ತವ್ಯ ಹೂಡುವ ಅವರು, ಜ.30ರಂದು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

 

Translate »