ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಪಟ್ಟು
News

ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಪಟ್ಟು

November 25, 2022

ಬೆಂಗಳೂರು, ನ.24 (ಕೆಎಂಶಿ)- ಜನಸಂಖ್ಯೆಗೆ ಅನು ಗುಣವಾಗಿ ನಮಗೂ ಮೀಸಲಾತಿ ಹೆಚ್ಚಿಸಿ ಎಂದು ಒಕ್ಕಲಿಗರು ಬೀದಿಗಿಳಿಯಲು ಮುಂದಾಗಿದ್ದಾರೆ. ಮೀಸಲಾತಿಗಾಗಿ ಯಾವ ರೀತಿಯ ಹೋರಾಟ ಹಮ್ಮಿಕೊಳ್ಳ ಬೇಕು ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯ ಒಕ್ಕಲಿಗರ ಸಂಘ ಇದೇ ನ.27 ರಂದು ಮುಖಂಡರ ಸಭೆ ಕರೆದಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್. ಬಾಲಕೃಷ್ಣ, ಅಂದು ಬೆಳಿಗ್ಗೆ ಸಮಾಜದ ಮೀಸಲಾತಿ ಹೆಚ್ಚಿಸುವ ವಿಚಾರವಾಗಿ ಸಭೆ ಕರೆಯಲಾ ಗಿದೆ. ಈ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಮಾಡಲಾಗುತ್ತದೆ ಎಂದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾ ನಂದನಾಥ ಮಹಾಸ್ವಾಮೀಜಿ ಅವರು, ಪಟ್ಟನಾಯಕನಹಳ್ಳಿ ಮಠದ ನಂಜಾವ ಧೂತ ಮಹಾಸ್ವಾಮೀಜಿರವರು ಮತ್ತು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರನಾಥ ಮಹಾ ಸ್ವಾಮೀಜಿ ಅವರುಗಳು ದಿವ್ಯಸಾನ್ನಿಧ್ಯ ದಲ್ಲಿ ಈ ಸಭೆ ನಡೆಯಲಿದೆ ಎಂದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇ ಗೌಡರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಡಿ.ವಿ. ಸದಾನಂದಗೌಡರು, ಹೆಚ್.ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾ ರದ ಸಚಿವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಭೆಗೆ ಆಹ್ವಾನಿ ಸಲಾಗಿದೆ. ಸಮುದಾಯದ ಎಲ್ಲಾ ಮಾಜಿ ಸಚಿವರು, ಸಂಸದರು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು, ಸಾಹಿತಿ ಗಳು, ಸಮಾಜದ ವಿವಿಧ ಸಂಘ-ಸಂಸ್ಥೆ ಗಳ ಪ್ರಮುಖರು, ರೈತ ಮುಖಂಡರು, ಕಾರ್ಮಿಕರ ಮುಖಂಡರು, ನೌಕರ ವರ್ಗದವರು, ವಕೀಲರು, ವೈದ್ಯರು, ವಿದ್ಯಾರ್ಥಿಗಳು, ಚಲನಚಿತ್ರ ರಂಗದ ವರು, ಕಲಾವಿದರು, ವಾಣಿಜ್ಯೋದ್ಯಮಿ ಗಳು, ಶಿಕ್ಷಣ ತಜ್ಞರು, ಸ್ಥಳೀಯ ಜನಪ್ರತಿ ನಿಧಿಗಳು, ಇನ್ನಿತರ ಗಣ್ಯರು ಸೇರಿದಂತೆ ರಾಜ್ಯವ್ಯಾಪ್ತಿಯಾಗಿರುವ ಸಮಾಜ ಬಂಧುಗಳು ಈ ಸಭೆಯಲ್ಲಿ ಭಾಗವಹಿಸಲಿ ದ್ದಾರೆ ಎಂದು ಅವರು ತಿಳಿಸಿದರು.

ಒಕ್ಕಲಿಗ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ ಜಾತಿವಾರು ಜನಗಣತಿ ಸರಿ ಯಾಗಿ ನಡೆದಿಲ್ಲ ಎಂಬ ಅಸಮಾಧಾನವು ಕೇಳಿಬರುತ್ತಿದೆ. ಹೀಗಾಗಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ.4ರ ಮೀಸಲಾತಿ ನೀಡುತ್ತಿರುವುದು ತುಂಬಾ ಕಡಿಮೆ ಯಾಗಿದ್ದು, ಶೇ.12ಕ್ಕೆ ಹೆಚ್ಚಿಸಬೇಕು. ಇಲ್ಲದಿದ್ದರೆ, ಒಕ್ಕಲಿಗ ಸಮುದಾಯದವರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ನಿಗಧಿಪಡಿ ಸಿರುವ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ 3ಎ ಅಡಿಯಲ್ಲಿ ಒಕ್ಕಲಿಗರ ಸಮುದಾಯ, ಒಕ್ಕಲಿಗರ ಉಪ ಪಂಗಡಗಳು ಹಾಗೂ ಇತರೆ ಜಾತಿಗಳು ಸೇರಿವೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿ ಪಂಗಡದವರ ಮೀಸಲಾತಿ ಯನ್ನು ಅವರ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಳ ಮಾಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಅದೇ ರೀತಿ ನಮ್ಮ ಸಮು ದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಒಕ್ಕೊರಲಿನಿಂದ ಆಗ್ರಹಿಸುತ್ತೇವೆ. ಬೇರೆ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಲು ನಮ್ಮ ಅಭ್ಯಂತರವಿಲ್ಲ. ಆದರೆ, ಆದೇ ರೀತಿ ರಾಜ್ಯದಲ್ಲಿ ಅಧಿಕ ಜನಸಂಖ್ಯೆಯನ್ನು ಹೊಂದಿರುವ ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ತಿಳಿಸಿದರು.

Translate »