ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧ ಸಾವು
ಮೈಸೂರು

ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧ ಸಾವು

May 3, 2019

ಮೈಸೂರು: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಾಯ ಗೊಂಡಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ಬುಧವಾರ ಸಂಭವಿಸಿದೆ.

ಮೈಸೂರಿನ ಮಂಚೇಗೌಡನಕೊಪ್ಪಲು ನಿವಾಸಿ ರಾಮೇಗೌಡ (86) ಸಾವನ್ನಪ್ಪಿ ದವರು. ಮಾ.20ರಂದು ಮಧ್ಯಾಹ್ನ 12.30ಗಂಟೆ ವೇಳೆಗೆ ಜಮೀನಿಗೆ ನಡೆದು ಕೊಂಡು ಹೋಗುತ್ತಿದ್ದಾಗ ಹೆಬ್ಬಾಳಿನ ಶೇಷಾದ್ರಿಪುರಂ ಕಾಲೇಜು ಬಳಿ ರಿಂಗ್ ರಸ್ತೆಯಲ್ಲಿ ದ್ವಿಚಕ್ರವಾಹನವೊಂದು ಡಿಕ್ಕಿ ಹೊಡೆದಿತ್ತು. ಕಾಲಿಗೆ ತೀವ್ರ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದ ರಾಮೇಗೌಡರನ್ನು ಕೆ.ಆರ್.ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ತಿಂಗಳಾದರೂ ಪ್ರಜ್ಞೆ ಬಾರದ ಕಾರಣ ಮನೆಯವರು ರಾಮೇ ಗೌಡರನ್ನು ಹೆಬ್ಬಾಳಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಕೊನೆಗೂ ಚೇತರಿಸಿಕೊಳ್ಳದ ರಾಮೇಗೌಡರು ಬುಧವಾರ ಬೆಳಿಗ್ಗೆ 8 ಗಂಟೆ ವೇಳೆಗೆ ಕೊನೆ ಯುಸಿರೆಳೆದರು. ವಿವಿ.ಪುರಂ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

Translate »