ರಾಜ್ಯದಲ್ಲಿ ಒಮಿಕ್ರಾನ್  ಮೂರನೇ ಪ್ರಕರಣ ಪತ್ತೆ
News

ರಾಜ್ಯದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಪತ್ತೆ

December 13, 2021

ಬೆಂಗಳೂರು,ಡಿ.12-ಕರ್ನಾಟಕದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಭಾನು ವಾರ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೃಢಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯ ಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ದೇಶದಲ್ಲಿ ಕೋವಿಡ್-19 ವೈರಸ್‍ನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಿದ್ದು, ಇದೀಗ ಕೇರಳ, ಆಂಧ್ರ ಪ್ರದೇಶ ಮತ್ತು ನಾಗಪುರದಲ್ಲಿ ಮೊದಲ ಒಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಆಂಧ್ರ ಪ್ರದೇಶದಲ್ಲಿ ಮೊದಲ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅಲ್ಲದೆ, ಕರ್ನಾಟಕದಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು ಇದರೊಂದಿಗೆ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 37ಕ್ಕೇರಿದೆ. ಐರ್ಲೆಂಡ್‍ನಿಂದ ಮುಂಬೈ ವಿಮಾನ ನಿಲ್ದಾಣದ ಮೂಲಕ ಬಂದ 34 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್‍ನ ರೂಪಾಂತರ ತಳಿ ಒಮಿಕ್ರಾನ್ ಪತ್ತೆಯಾಗಿತ್ತು. ಆದರೆ, ಇದೀಗ ಅವರು ಗುಣಮುಖರಾಗಿ ದ್ದಾರೆ ಎಂದು ಆಂಧ್ರಪ್ರದೇಶ ಆರೋಗ್ಯ ಇಲಾಖೆ ತಿಳಿಸಿದೆ. ಆಂಧ್ರ ಪ್ರದೇಶದಲ್ಲಿ ವರದಿಯಾದ ಮೊದಲ ಒಮಿಕ್ರಾನ್ ಪ್ರಕರಣ ಇದಾಗಿದೆ.

ನಾಗಪುರದಲ್ಲಿ ಮೊದಲ ಪ್ರಕರಣ: ಇತ್ತ ಮಹಾರಾಷ್ಟ್ರದ ನಾಗ್ಪುರದಲ್ಲಿ ಪಶ್ಚಿಮ ಆಫ್ರಿಕಾದಿಂದ ವಾಪಸಾದ 40 ವರ್ಷದ ವ್ಯಕ್ತಿಯಲ್ಲಿ ಓಮೈಕ್ರಾನ್ ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಯು ಸ್ಥಳೀಯ ನಿವಾಸಿಯಾಗಿದ್ದು, 8 ದಿನಗಳ ಹಿಂದೆ ಪಶ್ಚಿಮ ಆಫ್ರಿಕಾದಿಂದ ವಾಪಸಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳದಲ್ಲೂ ಪತ್ತೆ: ಇದೇ ವೇಳೆ ಕೇರಳದಲ್ಲೂ ಮೊದಲ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಮ್ಮ ಫೇಸ್ ಬುಕ್ ಪುಟದಲ್ಲಿ ಪೆÇೀಸ್ಟ್ ಮಾಡಿದ ವೀಡಿಯೊದಲ್ಲಿ, ರೋಗಿಯು ಇತ್ತೀಚೆಗೆ ಯುನೈಟೆಡ್ ಕಿಂಗ್‍ಡಮ್‍ನಿಂದ ಬಂದ ಕೇರಳ ಮೂಲದವರು ಎಂದು ಹೇಳಿದ್ದು, ವೈರಸ್‍ನ ಹೊಸ ರೂಪಾಂತರದ ಹರಡುವಿಕೆಯನ್ನು ತಡೆಯಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಚಂಡೀಘಢ: ಚಂಡೀಘಡದಲ್ಲಿ ನ.22ರಂದು ಭಾರತಕ್ಕೆ ಬಂದಿಳಿದಿದ್ದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಪ್ರಸ್ತುತ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾರೆ. ಅವರೊಂದಿಗೆ ಅವರ ಸಂಪರ್ಕಕ್ಕೆ ಬಂದ ಏಳು ಸದಸ್ಯರನ್ನು ಕೂಡ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

Translate »