ದೇಶದಲ್ಲಿ ಒಮಿಕ್ರಾನ್ ಭೀತಿ: ರಾಜ್ಯಗಳಿಗೆ ಕೇಂದ್ರದ ಎಚ್ಚರ
News

ದೇಶದಲ್ಲಿ ಒಮಿಕ್ರಾನ್ ಭೀತಿ: ರಾಜ್ಯಗಳಿಗೆ ಕೇಂದ್ರದ ಎಚ್ಚರ

November 29, 2021

ನವದೆಹಲಿ, ನ.28- ವಿಶ್ವದಾದ್ಯಂತ ಕೋವಿಡ್ ಹೊಸ ತಳಿ ಒಮಿಕ್ರಾನ್ ಹರಡುವ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಭಾನುವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಹೆಚ್ಚಿಸುವಂತೆ ಹಾಗೂ ಸೋಂಕು ಹರಡುವಿಕೆ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸು ವಂತೆ ಸೂಚಿಸಿದ್ದಾರೆ. ಸೋಂಕು ಹರಡು ವಿಕೆ ಕುರಿತು ಸೂಕ್ಷ್ಮ ನಿಗಾ ವಹಿಸು ವಂತೆ ನಿರ್ದೇಶನ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೋವಿಡ್ ತಳಿ ಪತ್ತೆಯಾದ ನಂತರ ಜಗತ್ತಿನಾದ್ಯಂತ ವಿವಿಧ ರಾಷ್ಟ್ರಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಲಸಿಕೆ ಒಮಿಕ್ರಾನ್ ತಳಿ ವಿರುದ್ಧ ಪರಿ ಣಾಮಕಾರಿಯೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಶನಿವಾರ ಕೋವಿಡ್ -19 ಪರಿಸ್ಥಿತಿ ಕುರಿತ ಪರಾಮರ್ಶನ ಸಭೆ ನಡೆದಿತ್ತು. ಭಾನುವಾರ ಬೆಳಗ್ಗೆ ವಿವಿಧ ತಜ್ಞರೊಂದಿಗೆ ತುರ್ತು ಸಭೆ ನಡೆಸಿದ ಕೇಂದ್ರ ಗೃಹ ಕಾರ್ಯದರ್ಶಿ, ಈ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಇರುವ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದರು. ದೇಶದೊಳಗೆ ಬರುವ ವಿದೇಶಿ ಪ್ರವಾಸಿಗರ ಮೇಲಿನ ನಿಗಾ ಹಾಗೂ ಪರೀಕ್ಷೆ ಕುರಿತ ಮಾರ್ಗ ಸೂಚಿಯನ್ನು ಕೇಂದ್ರ ಸರ್ಕಾರ ಇದೀಗ ಪರಾಮರ್ಶೆ ನಡೆಸಿರುವು ದಾಗಿ ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

Translate »