ನ.12, ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ
ಕೊಡಗು

ನ.12, ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

November 10, 2022

ಮಡಿಕೇರಿ,ನ.9- ಮಡಿಕೇರಿಯಲ್ಲಿ ನೂತನ ವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ನ.12ರಂದು ಉದ್ಘಾಟನೆಗೊಳ್ಳಲಿದ್ದು, ನ.14ರಿಂದ ಕಾರ್ಯ, ಕಲಾಪಗಳು ಆರಂಭಗೊಳ್ಳಲಿವೆ ಎಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ, ವಕೀಲ ಕೆ.ಡಿ.ದಯಾನಂದ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲಾ ನ್ಯಾಯಾಂಗ, ಕೊಡಗು-ಮಡಿಕೇರಿ ಲೋಕೋಪಯೋಗಿ ಇಲಾಖೆ ಮತ್ತು ಕೊಡಗು ಜಿಲ್ಲಾ ಬಾರ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ವಿದ್ಯಾನಗರದಲ್ಲಿ ನೂತನ ವಾಗಿ ನಿರ್ಮಿಸಲಾದ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಭಾರತದ ಸರ್ವೋಚ್ಚ ನ್ಯಾಯಾ ಲಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಕರ್ನಾ ಟಕ ಹೈಕೋರ್ಟ್ ಮತ್ತು ಆಡಳಿತಾತ್ಮಕ ನ್ಯಾಯಾಧೀಶ ಈ.ಎಸ್.ಇಂದಿರೇಶ್, ಕರ್ನಾ ಟಕ ಉಚ್ಚ ನ್ಯಾಯಾಲಯದ ನ್ಯಾಯಾ ಧೀಶರಾದ ಎಂ.ಜಿ.ಶುಕುರೆ ಕಮಲ್, ಸಿ.ಎಂ.ಪೂಣಚ್ಚ, ಕೊಡಗು ಜಿಲ್ಲಾ ಉಸ್ತು ವಾರಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಪಾಲ್ಗೊಳ್ಳಲಿದ್ದಾರೆ.

ಅತಿಥಿಗಳಾಗಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಮುರಳೀಧರ ಪೈ ಭಾಗವಹಿಸಲಿದ್ದಾರೆ ಎಂದು ಕೆ.ಡಿ.ದಯಾನಂದ್ ತಿಳಿಸಿದರು.

36.6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗಿರುವ ಈ ಸಂಕೀರ್ಣಕ್ಕೆ 2012ರಲ್ಲಿ ಜಾಗ ಮಂಜೂರಾಗಿದ್ದು, 2014ರಲ್ಲಿ ಕಾಮ ಗಾರಿ ಪ್ರಾರಂಭವಾಗಿದೆ. ಇದೀಗ ಉದ್ಘಾಟನೆಗೆ ಸಜ್ಜಾಗಿದ್ದು, ಇದೇ ದಿನ ಕಾನೂನು ಸೇವಾ ಪ್ರಾಧಿಕಾರದ ಕಟ್ಟಡವು ಉದ್ಘಾಟನೆಗೊಳ್ಳ ಲಿದೆ ಎಂದರು.

ಬಸ್ ವ್ಯವಸ್ಥೆ: ನೂತನ ಕಟ್ಟಡ ಮಡಿಕೇರಿಯ ಮುಖ್ಯಕೇಂದ್ರದಿಂದ 3 ಕಿ.ಮೀ ದೂರದ ಲ್ಲಿರುವುದರಿಂದ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸು ವಂತೆ ಹಾಗೂ ಸುಗಮ ಸಂಚಾರಕ್ಕೆ ಕಿರಿದಾದ ರಸ್ತೆಯನ್ನು ವಿಸ್ತರಿಸುವಂತೆ ಜಿಲ್ಲಾಧಿಕಾರಿ ಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಈಗಾಗಲೇ ನ್ಯಾಯಾಧೀಶರಿಗೆ, ವಕೀಲರಿಗೆ, ಕಕ್ಷಿದಾರರಿಗಾಗಿ ಪ್ರತ್ಯೇಕ ಪಾಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಕೀಲರ ವಾಹನ ನಿಲುಗಡೆ ಗಾಗಿ 36 ಲಕ್ಷ ರೂ. ವೆಚ್ಚದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸದ್ಯದಲ್ಲೇ ಪೂರ್ಣಗೊಳ್ಳಲಿದೆ ಎಂದರು.

ಹಳೆ ಕಟ್ಟಡಕ್ಕೆ ಕೃತಜ್ಞತೆ: 1971ರಲ್ಲಿ ನಗರದ ಕೋಟೆ ಆವರಣದಲ್ಲಿ ಪ್ರಾರಂಭವಾದ ಕಟ್ಟಡ ದೊಂದಿಗೆ ಹಲವು ವಕೀಲರು, ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಭವನಾತ್ಮಕ ಸಂಬಂಧ ಹೊಂದಿದ್ದರು. ಈ ಕಟ್ಟಡಕ್ಕೆ ವಕೀಲರು, ಪೊಲೀಸ್ ಇಲಾಖೆ ಸಿಬ್ಬಂದಿಗಳಿಂದ ಚಪ್ಪಾಳೆ ತಟ್ಟವ ಮೂಲಕ ಕೃತಜ್ಞತೆ ಸಲ್ಲಿಸಲಾಗಿದೆ ಎಂದರು.
ಸಂಘದ ಉಪಾಧ್ಯಕ್ಷ ರತನ್ ತಮ್ಮಯ್ಯ ಮಾತನಾಡಿ, ನೂತನ ಕಟ್ಟದಲ್ಲಿ 9 ಸಭಾಂಗಣ ವಿದ್ದು, 5 ಕೋರ್ಟ್‍ಗಳಲ್ಲಿ ನಿರಂತರ ಕಾರ್ಯಾ ಭಾರ ನಡೆಯಲಿದೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಕಾರ್ಯ ದರ್ಶಿ ಅರುಣ್ ಕುಮಾರ್, ಜಂಟಿ ಕಾರ್ಯ ದರ್ಶಿ ಸಂಜಯ್ ರಾಜ್ ಉಪಸ್ಥಿತರಿದ್ದರು.

Translate »