ಸೆ.24, ಮಹಂತಾಳಪುರದಲ್ಲಿ ಅಂಚೆ ಸಂತೆ
ಚಾಮರಾಜನಗರ

ಸೆ.24, ಮಹಂತಾಳಪುರದಲ್ಲಿ ಅಂಚೆ ಸಂತೆ

September 19, 2018

ಚಾಮರಾಜನಗರ: ಅಂಚೆ ಇಲಾಖೆಯು ಜಿಲ್ಲೆಯ ಸಂತೆಮರಹಳ್ಳಿ ಹೋಬಳಿಯ ಮಹಂತಾಳಪುರ ಗ್ರಾಮದಲ್ಲಿ ಸೆಪ್ಟೆಂಬರ್ 24ರಂದು ಅಂಚೆ ಸಂತೆ ನಡೆಸಲಿದೆ.ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಸ್ವೀಕರಿಸಲಾಗುವುದು.

ಮಹಂತಾಳಪುರ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕ ಹೆಚ್.ಸಿ.ಸದಾನಂದ ಕೋರಿದ್ದಾರೆ.

Translate »