ಮತ್ತೆ ಅಧಿಕಾರಕ್ಕೆ ಬಂದರೆ ತಲಾ 10 ಕೆಜಿ ಅಕ್ಕಿ ಉಚಿತ
News

ಮತ್ತೆ ಅಧಿಕಾರಕ್ಕೆ ಬಂದರೆ ತಲಾ 10 ಕೆಜಿ ಅಕ್ಕಿ ಉಚಿತ

October 26, 2021

ಬೆಂಗಳೂರು, ಅ.25(ಕೆಎಂಶಿ)-ಮುಂಬರುವ ವಿಧಾನಸಭಾ ಚುನಾ ವಣೆಯಲ್ಲಿ ನಾವೇ ಅಧಿಕಾರಕ್ಕೆ ಬಂದು, ಬಿಪಿಎಲ್ ಕುಟುಂಬದ ಪ್ರತಿ ಯೂನಿಟ್‍ಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವುದಾಗಿ ವಿಧಾನಸಭೆ ಪ್ರತಿಪಕ್ಷದನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉಪಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರು ತ್ತದೆ ಎನ್ನುವ ಬದಲು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರಲ್ಲದೆ, ಉಚಿತ ಅಕ್ಕಿ ಅಲ್ಲದೆ ಇತರ ಸೌಲಭ್ಯಗಳನ್ನೂ ಕಲ್ಪಿಸುವುದಾಗಿ ತಿಳಿಸಿ ದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನ ಭಾಗ್ಯದ ಅಕ್ಕಿ ಪ್ರಮಾಣವನ್ನು 5 ಕೆ.ಜಿ.ಗೆ ಇಳಿಸಿ, ನೀವು ತಿನ್ನುವ ಅನ್ನ ಕಸಿ ದಿದೆ. ಯಾವುದೇ ಜಾತಿ, ಧರ್ಮ ನೋಡದೆ ಉಚಿತವಾಗಿ ಬಡವ ರಿಗೆ ಅನ್ನಭಾಗ್ಯ ಕಾರ್ಯಕ್ರಮ ಘೋಷಣೆ ಮಾಡಿದೆ. ಇದರಿಂದ ಉದ್ಯೋಗ ಅರಸಿ ಹೊಟ್ಟೆ ಪಾಡಿಗಾಗಿ ಗುಳೇ ಹೋಗುತ್ತಿದ್ದವರು ತಮ್ಮ ಊರುಗಳಲ್ಲೇ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‍ಗೆ 5 ರೂ. ಪ್ರೋತ್ಸಾಹ ಧನ ನೀಡು ತ್ತಿದ್ದೆ. ಈ ಸರ್ಕಾರ ಬಂದು ಪ್ರೋತ್ಸಾಹ ಧನವನ್ನೂ ನೀಡುತ್ತಿಲ್ಲ, ಭಾಗ್ಯ ಜ್ಯೋತಿ ಸಂಪರ್ಕವನ್ನೂ ಕಡಿತಗೊಳಿಸುತ್ತಿದೆ ಎಂದರು.

ಬಂಜಾರ ಸಮುದಾಯವನ್ನು ಹಿಂದುಳಿದ ಜಾತಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದವರು ಅರಸು ಮತ್ತು ರಾಥೋಡ್, ಎಸ್.ಸಿ ಮೀಸಲಾತಿ ದೊರೆತ ಕಾರಣಕ್ಕೆ ಬಂಜಾರ ಸಮುದಾಯ ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗಿದೆ. ನನ್ನ ಐದು ವರ್ಷಗಳ ಆಡಳಿತದುದ್ದಕ್ಕೂ ಪ್ರಾಮಾ ಣಿಕ ಪ್ರಯತ್ನ ಮಾಡಿದೆ, ಅಧಿಕಾರ ವಹಿಸಿಕೊಂಡ ಮರು ಘಳಿಗೆ ಯಲ್ಲೇ ಸಂಪುಟ ಸಭೆ ಕರೆದು ಎಲ್ಲಾ ಜಾತಿ ಧರ್ಮಗಳ ಬಡವರಿಗೆ ಉಚಿತವಾಗಿ ಅಕ್ಕಿ ನೀಡುವ ಅನ್ನಭಾಗ್ಯ ಕಾರ್ಯಕ್ರಮವನ್ನು ಘೋಷಣೆ ಮಾಡಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಬಂಜಾರ ಅಭಿವೃದ್ಧಿ ನಿಗಮ, ತಾಂಡಾ ಅಭಿ ವೃದ್ಧಿ ನಿಗಮ, ಅಂಬೇ ಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿ ವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮ ಗಳಲ್ಲಿದ್ದ ಬಡವರ ಸಾಲ ವನ್ನು ಮನ್ನಾ ಮಾಡಿದೆ. ಸಂತ ಸೇವಾಲಾಲ್ ಅವರ ಜಯಂತಿಯನ್ನು ಸರ್ಕಾರಿ ಜಯಂತಿ ಯಾಗಿ ಆಚರಣೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದು ನಮ್ಮ ಸರ್ಕಾರ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಐದು ವರ್ಷಗಳಲ್ಲಿ ನಮ್ಮ ಸರ್ಕಾರ 84,000 ಕೋಟಿ ರೂ. ಖರ್ಚು ಮಾಡಿತ್ತು. ಜನಸಂಖ್ಯೆಗೆ ಅನು ಗುಣವಾಗಿ ಅನುದಾನ ಹಂಚಿಕೆಯಾಗುವಂತೆ ಎಸ್.ಸಿ.ಪಿ/ಟಿ.ಎಸ್.ಪಿ ಕಾಯ್ದೆ ಜಾರಿಗೊಳಿಸಿದ್ದು ನಮ್ಮ ಸರ್ಕಾರ. ತಾಂಡ ಗಳು, ಹಟ್ಟಿಗಳು, ಮಜರೆಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕ್ರಾಂತಿಕಾರಕ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯಿದೆಯನ್ನು ಜಾರಿಗೊಳಿಸಿ, ಲಕ್ಷಾಂತರ ಜನರಿಗೆ ಭೂಮಿಯ ಒಡೆತನದ ಹಕ್ಕು ನೀಡಿದ್ದು ನಮ್ಮ ಸರ್ಕಾರ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

Translate »