ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮೈಸೂರು ಜಿಲ್ಲಾ ವೀಕ್ಷಕ ಕೇರಳ ಸಂಸದ ರಾಘವನ್ ವಿಶ್ವಾಸ
ಮೈಸೂರು

ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮೈಸೂರು ಜಿಲ್ಲಾ ವೀಕ್ಷಕ ಕೇರಳ ಸಂಸದ ರಾಘವನ್ ವಿಶ್ವಾಸ

April 26, 2018

ಮೈಸೂರು: ಪ್ರಸಕ್ತ ವಿಧಾನಸಭಾ ಚುನಾವಣೆ ಧರ್ಮ ಹಾಗೂ ಅಧರ್ಮಗಳ ನಡುವೆ ನಡೆಯುತ್ತಿರುವ ಚುನಾವಣೆಯಾಗಿದ್ದು, ಸಾಲಮನ್ನಾ, ಅನ್ನಭಾಗ್ಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ಭ್ರಷ್ಟಾ ಚಾರ ರಹಿತ ಸುಭದ್ರವಾದ ಸರ್ಕಾರ ನೀಡಿ ರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡ ಳಿತವನ್ನು ಮೆಚ್ಚಿರುವ ರಾಜ್ಯದ ಜನತೆ ಈ ಬಾರಿಯೂ ಕಾಂಗ್ರೆಸ್‍ಗೆ ಬೆಂಬಲ ನೀಡಲು ಉತ್ಸುಕರಾಗಿದ್ದಾರೆ ಎಂದು ಕೇರಳ ಸಂಸದ ಹಾಗೂ ಮೈಸೂರು ಜಿಲ್ಲಾ ವೀಕ್ಷಕ ರಾಘವನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ರಾಜ್ಯದಲ್ಲಿ ಕಳೆದ ಐದು ವರ್ಷದಿಂದ ಸಿದ್ದರಾಮಯ್ಯ ಯಾವುದೇ ಕಳಂಕವಿಲ್ಲದೆ, ಸ್ವಚ್ಛ ಆಡಳಿತ ನೀಡಿದ್ದಾರೆ. ಭ್ರಷ್ಟಾಚಾರ ರಹಿತ, ಹಗರಣ ರಹಿತ, ಸುಭದ್ರ ಸರ್ಕಾರ ನೀಡುವುದರೊಂದಿಗೆ ಎಲ್ಲಾ ಜಾತಿ, ಸಮುದಾಯ ಮತ್ತು ಧರ್ಮಗಳ ಹಿತ ಕಾಯುವ ಹಾಗೂ ಅಭಿವೃದ್ಧಿಗೆ ಪೂರಕ ವಾದ ಕಾರ್ಯಕ್ರಮಗಳನ್ನು ನೀಡಿ ಜನ ಮನ್ನಣೆ ಗಳಿಸಿದ್ದಾರೆ. ವಿರೋಧ ಪಕ್ಷಗಳ ಮುಖಂಡರು ಜನರನ್ನು ಹಾದಿ ತಪ್ಪಿಸಲು ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುವಲ್ಲಿ ನಿರತವಾಗಿದೆ. ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿ ರುವುದರ ಹಿಂದಿನ ಸಂಚನ್ನು ಜನರು ಅರಿತುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 12ರಂದು ನಡೆಯುವ ಚುನಾವಣೆ ಧರ್ಮ ಹಾಗೂ ಅಧರ್ಮಗಳ ನಡುವೆ ನಡೆಯುವ ಚುನಾವಣೆಯಾಗಿದ್ದು, ಅಂತಿಮವಾಗಿ ರಾಜ್ಯದ ಜನತೆ ಧರ್ಮಕ್ಕೆ ಜಯ ತಂದು ಕೊಡಲಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ಸಿಎಂ ಸಿದ್ದರಾಮಯ್ಯ ಕ್ಲೀನ್ ಅಂಡ್ ಸ್ಟ್ರಾಂಗ್ ನಾಯಕರಾಗಿರುವುದನ್ನು ಮನಗಂಡಿರುವ ರಾಜ್ಯದ ಜನತೆ ಉತ್ತಮ ಆಡಳಿತಕ್ಕಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ. ಈ ಚುನಾವಣೆ ಯಲ್ಲಿ ಕಾಂಗ್ರೆಸ್‍ಗೆ 130 ಸ್ಥಾನ ಲಭಿಸಲಿದೆ. ಮೈಸೂರಿನ 11 ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲು ತ್ತದೆ. ಆ ಮೂಲಕ ಕಾಂಗ್ರೆಸ್ ಯಾರೊಂ ದಿಗೂ ಹೊಂದಾಣ ಕೆ ಇಲ್ಲದಂತೆ ಸ್ವತಂತ್ರವಾಗಿ ಅಧಿಕಾರಕ್ಕೇರಲಿದೆ. ಬಿಜೆಪಿ 40 ಸ್ಥಾನ ಹಾಗೂ ಜೆಡಿಎಸ್ ಅದಕ್ಕಿಂತಲೂ ಕಡಿಮೆ ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದರು.

ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರ ಗಳಲ್ಲಿ ಸ್ಪರ್ಧಿಸಿರುವುದಕ್ಕೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಆದರೆ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಸ್ತುತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಎರಡು ಕಡೆಗಳಲ್ಲಿ ಸ್ಪರ್ಧಿಸಿರುವುದನ್ನು ಗಮನಿಸಿ ಲ್ಲವೇ? ಎಂದು ಪ್ರಶ್ನಿಸಿದ ಅವರು, ಟೀಕೆ ಮಾಡುವಾಗ ಸಕಾರಾತ್ಮಕವಾದ ವಿಷಯದಲ್ಲಿ ಟೀಕೆ ಮಾಡುವುದು ಒಳಿತು ಎನ್ನುವುದನ್ನು ಮನಗಾಣಬೇಕು ಎಂದು ಸಲಹೆ ನೀಡಿದ ಅವರು, ಹೈಕಮಾಂಡ್ ಸೂಚನೆ ಮೇರೆಗೆ ಎರಡು ಕಡೆಗಳಲ್ಲಿ ಸ್ಪರ್ಧಿಸಿದ್ದು, ಇದರಲ್ಲಿ ತಪ್ಪೇನಿಲ್ಲ. ಎರಡೂ ಕಡೆಯಲ್ಲೂ ಸಿದ್ದರಾಮಯ್ಯ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗ ರಾಧ್ಯಕ್ಷ ಆರ್.ಮೂರ್ತಿ, ಪಾಲಿಕೆ ಮಾಜಿ ಸದಸ್ಯ ಎಂ.ಶಿವಣ್ಣ, ಪಾಲಿಕೆ ಸದಸ್ಯ ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.

Translate »