ಒಂದು ರಾಷ್ಟ್ರ ಒಂದು ಚುನಾವಣೆ: ಚರ್ಚೆ
ಮೈಸೂರು

ಒಂದು ರಾಷ್ಟ್ರ ಒಂದು ಚುನಾವಣೆ: ಚರ್ಚೆ

March 3, 2021

ಬೆಂಗಳೂರು, ಮಾ.2- ಮಾರ್ಚ್ 4ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲ ಬಜೆಟ್ ಅಧಿವೇಶನ 19 ದಿನ ನಡೆಯಲಿದೆ. ಅಧಿವೇಶನದ ಮೊದ ಲೆರಡು ದಿನ `ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಕುರಿತಾಗಿ ಚರ್ಚೆ ನಡೆಸಲಾಗುವುದು. ಫಲಪ್ರದವಾಗಿ ಚರ್ಚೆ ನಡೆ ಯುವ ನಿಟ್ಟಿನಲ್ಲಿ ತಯಾರಿ ನಡೆಸಲಾಗಿದೆ. ಮಾ.8ಕ್ಕೆ ಬಜೆಟ್ ಮಂಡನೆ. ಬಳಿಕ ಬಜೆಟ್ ಕುರಿತಾಗಿ ಚರ್ಚೆ ನಡೆಯಲಿದೆ ಎಂದರು. ಈವರೆಗೆ 3 ವಿಧೇಯಕಗಳು ಬಂದಿವೆ, ಉಳಿದ ವಿಧೇಯಕಗಳನ್ನು ಬುಧವಾರ ಕಳಿಸುವಂತೆ ತಿಳಿಸಲಾಗಿದೆ. ಕರ್ನಾಟಕ ಪೌರ ಸೇವೆಗಳ ತಿದ್ದುಪಡಿ ಮಸೂದೆ, ಕರ್ನಾಟಕ ಲೇವಾದೇವಿ ತಿದ್ದುಪಡಿ ವಿಧೇಯಕ ಹಾಗೂ ಕರ್ನಾಟಕ ಸೊಸೈಟಿ ನೋಂದಣಿ ತಿದ್ದುಪಡಿ ವಿಧೇಯಕಗಳು ಬಂದಿವೆ ಎಂದರು. ಕೊರೊನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯ, ಆರೋಗ್ಯ ಸಮಸ್ಯೆ ಕಂಡುಬಂದರೆ ಸದನಕ್ಕೆ ಬಾರದಿರುವುದು ಒಳ್ಳೆಯದು. ಕಲಾಪ ವೀಕ್ಷಣೆಗೆ ಸಾರ್ವಜನಿಕರಿಗೆ ಗ್ಯಾಲರಿ ಪ್ರವೇಶಕ್ಕೆ ಅವಕಾಶವಿದೆ. ವಿದ್ಯಾರ್ಥಿಗಳಿಗೆ ಅವಕಾಶ ಇಲ್ಲ ಎಂದರು. ಸದನಕ್ಕೆ ಟಿವಿ ಕ್ಯಾಮೆರಾಗಳಿಗೆ ಅವಕಾಶ ನಿರಾಕರಿಸಲಾಗಿದೆ. ಇದಕ್ಕೆ ಮಾಧ್ಯಮಗಳು ವಿರೋಧ ವ್ಯಕ್ತಪಡಿಸಿವೆ.

Translate »