ಕೊರೊನಾಕ್ಕೆ ಕಡಿವಾಣ ಹಾಕಲು ಮತ್ತಷ್ಟು ಕಠಿಣ ಕ್ರಮ
ಮೈಸೂರು

ಕೊರೊನಾಕ್ಕೆ ಕಡಿವಾಣ ಹಾಕಲು ಮತ್ತಷ್ಟು ಕಠಿಣ ಕ್ರಮ

November 10, 2020

ಕೇಂದ್ರ ಸಚಿವ ಡಾ. ಹರ್ಷವರ್ಧನ್ ರಾಜ್ಯಕ್ಕೆ ಸೂಚನೆ
ಬೆಂಗಳೂರು, ನ. 9(ಕೆಎಂಶಿ)-ಕೊರೊನಾ ಸೋಂಕು ದಿನದಿಂದ ದಿನಕ್ಕೆ ರಾಷ್ಟ್ರದಲ್ಲಿ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ ವರ್ಧನ್ ಅತೀ ಹೆಚ್ಚು ಸೋಂಕಿರುವ ರಾಜ್ಯದ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೊಟ್ಟಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಈ ಆದೇಶ ನೀಡಿದ್ದಾರೆ. ಕರ್ನಾಟಕದಲ್ಲಿ ಸೋಂಕು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸೋಂಕಿನ ಬಗ್ಗೆ ಅಸಹಕಾರ ತೋರದೆ ಸಂಪೂರ್ಣವಾಗಿ ಅದನ್ನು ಕೊನೆಗಾಣಿಸುವವರೆಗೂ ಇದೇ ಪ್ರಮಾಣದಲ್ಲಿ ಬಿಗಿ ಕ್ರಮವನ್ನು ಮುಂದುವರೆಸಿ ಎಂದಿದ್ದಾರೆ. ನವೆಂಬರ್-ಡಿಸೆಂಬರ್ ಎರಡು ತಿಂಗಳು ಬಾರಿ ಎಚ್ಚರಿಕೆ ಮತ್ತು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ. ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಚಾಚು ತಪ್ಪದೇ ಪಾಲಿಸಿ ಮತ್ತು ಸಾರ್ವಜನಿಕರಲ್ಲಿ ತಿಳುವಳಿಕೆಗೆ ಮತ್ತಷ್ಟು ಆದ್ಯತೆ ನೀಡಿ ಎಂದಿದ್ದಾರೆ.

 

Translate »