ಆನ್‍ಲೈನ್ ತರಗತಿಗೆ ನಿಷೇಧ: ಪರ್ಯಾಯ ಮಾರ್ಗಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಮೈಸೂರು

ಆನ್‍ಲೈನ್ ತರಗತಿಗೆ ನಿಷೇಧ: ಪರ್ಯಾಯ ಮಾರ್ಗಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

June 23, 2020

ಬೆಂಗಳೂರು: ಆನ್‍ಲೈನ್ ತರಗತಿಗಳನ್ನು ನಿಷೇಧಿಸಿರುವುದಕ್ಕೆ ಪರಿಹಾರ ಕಂಡು ಕೊಳ್ಳಬೇಕೆಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್-19ರ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿಗಳಿಗೆ ಸೀಮಿತ ಅವಧಿಗೆ ಆನ್‍ಲೈನ್ ಶಿಕ್ಷಣಕ್ಕೆ ಅವಕಾಶ ನೀಡಬಹುದೇ ಎಂಬುದರ ಕುರಿತು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪ್ರಾಥಮಿಕ ಶಾಲೆಗಳಿಗೆ ಆನ್‍ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಜೂ.15ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ನಿಗದಿತ ಅವಧಿಗೆ ಆನ್‍ಲೈನ್ ಶಿಕ್ಷಣ ಒದಗಿಸಬಹುದೇ ಎಂದು ಪ್ರಶ್ನಿಸಿತು. ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಐಸಿಎಸ್‍ಇ ಹಾಗೂ ಸಿಬಿಎಸ್‍ಇ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಹೇಗೆ ಅನ್ವಯ ವಾಗಲಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.

Translate »