ರಾಜ್ಯದ ವಿಶ್ವವಿದ್ಯಾನಿಲಯದಲ್ಲಿ ಮಾ.೧ರಿಂದ ಆನ್‌ಲೈನ್ ಕಡತ ವಿಲೇವಾರಿ
ಮೈಸೂರು

ರಾಜ್ಯದ ವಿಶ್ವವಿದ್ಯಾನಿಲಯದಲ್ಲಿ ಮಾ.೧ರಿಂದ ಆನ್‌ಲೈನ್ ಕಡತ ವಿಲೇವಾರಿ

February 26, 2022

ಬೆಂಗಳೂರು, ಫೆ.೨೫(ಕೆಎಂಶಿ)-ರಾಜ್ಯ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ ೧ರಿಂದ ತಮ್ಮೆಲ್ಲಾ ಕಡತಗಳನ್ನು ಇ-ಕಚೇರಿ ಮೂಲಕವೇ ಅನ್‌ಲೈನ್‌ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ದಿನಾಂಕದ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಅವರು ಸೂಚಿಸಿದ್ದಾರೆ. ಇಲಾಖೆಯ ಹೆಚ್ಚು ವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಇ-ಆಫೀಸ್ ತಂತ್ರಾAಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಲಾಗಿತ್ತು, ಆದರೂ ಕೆಲವು ವಿ.ವಿ.ಗಳಲ್ಲಿ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದಿದ್ದಾರೆ. ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾAಶದ ಮೇಲೆ ಕಾರ್ಯನಿರ್ವಹಿಸುತ್ತಿದೆ, ಆದರೆ, ಇಲಾಖೆಗೆ ವಿ.ವಿ.ಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದ ಇ-ಆಫೀಸ್ ತಂತ್ರಾAಶ ಅಳವಡಿಕೆಯ ಮೂಲ ಉದ್ದೇಶವೇ ವಿಫಲವಾದಂತಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿ ಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರ ದರ್ಶಕವಾಗಿ ನಡೆಯುವಂತೆ ಮಾಡಬೇಕೆನ್ನು ವುದು ಇ-ಆಫೀಸ್ ತಂತ್ರಾAಶದ ಗುರಿಯಾ ಗಿದೆ. ವಿ.ವಿ.ಗಳು ಸಮಕಾಲೀನ ಕಾರ್ಯಶೈಲಿ ಅಳವಡಿಸಿಕೊಳ್ಳದಿದ್ದರೆ ಹೇಗೆ ಎಂದಿದ್ದಾರೆ.
ಜೊತೆಗೆ, ಎನ್‌ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟಿçÃಯ ಶೈಕ್ಷಣ ಕ ಕೋಶ (ಎನ್‌ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಸಿದ್ಧಗೊಳಿಸಿರುವ ಬಗ್ಗೆ ಪರಿಶೀಲಿ ಸಲು ಒಂದು ಸಮಿತಿ ರಚಿಸಿ, ೧೫ ದಿನಗಳಲ್ಲಿ ವರದಿ ನೀಡುವಂತೆ ಅವರು ಸೂಚಿಸಿದ್ದಾರೆ.

 

Translate »