ಸರಳ, ಸುರಕ್ಷಿತ ಗಣೇಶ ಉತ್ಸವಕ್ಕೆ ಮಾತ್ರ ಅವಕಾಶ
ಮೈಸೂರು

ಸರಳ, ಸುರಕ್ಷಿತ ಗಣೇಶ ಉತ್ಸವಕ್ಕೆ ಮಾತ್ರ ಅವಕಾಶ

September 8, 2021

ಮೈಸೂರು, ಸೆ.7- ಮೈಸೂರು ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಮನೆಗಳಲ್ಲಿ, ಖಾಸಗಿ ಹಾಗೂ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಆಚರಿಸಲು ಅವಕಾಶ ನೀಡಲಾ ಗಿದೆ. ಅಧಿಕಾರಿಗಳು ಈ ನಿಯಮಗಳು ಕಟ್ಟು ನಿಟ್ಟಾಗಿ ಪಾಲನೆಯಾಗುವಂತೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದರು.

ಡಿಸಿ ಕಚೇರಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಅಧಿ ಕಾರಿಗಳ ಸಭೆ ನಡೆಸಿ, ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆ ಬಗ್ಗೆ ಅವರು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು 4 ಅಡಿ ಎತ್ತರ ಹಾಗೂ ಮನೆಯೊಳಗೆ 2 ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬಹುದು. ಗಣೇಶೋತ್ಸವ ಸಮಿತಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಗಳಿಂದ ಪೂರ್ವಾನು ಮತಿ ಪಡೆಯಬೇಕು. ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಗಣೇಶೋತ್ಸವ ಆಚರಿಸಲು ಪೆÇ್ರೀತ್ಸಾಹಿಸಲಾಗಿದೆ. 20ಕ್ಕಿಂತ ಹೆಚ್ಚು ಜನ ಸೇರಬಾರದು. ಆಯೋಜಕರು ಕೋವಿಡ್-19 ನೆಗೆಟಿವ್ ರಿಪೆÇೀರ್ಟ್ ಹಾಗೂ ಲಸಿಕೆ ಪಡೆದಿರುವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಹಾಗೆಯೇ ಉತ್ಸವ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸ ಲಾಗಿದೆ ಎಂದರು. ಗಣೇಶ ಮೂರ್ತಿ ಪ್ರತಿ ಷ್ಠಾಪನಾ ಸ್ಥಳಗಳಲ್ಲಿ ಯಾವುದೇ ರೀತಿಯ ಸಾಂಸ್ಕøತಿಕ, ಸಂಗೀತ, ನೃತ್ಯ, ಹಾಗೂ ಮುಖ್ಯ ವಾಗಿ ಡಿ.ಜೆ.ಯ ಮೂಲಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ವಿರುವುದಿಲ್ಲ. ದರ್ಶನಕ್ಕಾಗಿ ಬರುವ ಭಕ್ತಾದಿ ಗಳು ಕನಿಷ್ಠ 6 ಅಡಿ ಅಂತರ, ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಕಡ್ಡಾಯವಾಗಿ ಬಳಸಬೇಕು ಎಂದು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗಬಾರದು. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು, ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು, ಸರ್ಕಾರಿ ಹಾಗೂ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳನ್ನು ಅತಿ ಕನಿಷ್ಠ ಜನಸಂಖ್ಯೆಯೊಂದಿಗೆ ಸಮೀಪದ ಮಾರ್ಗಗಳನ್ನು ಬಳಸಿಕೊಂಡು, ಪಾಲಿಕೆ, ಜಿಲ್ಲಾಡಳಿತ ಹಾಗೂ ಹತ್ತಿರದ ಸ್ಥಳೀಯ ಸಂಸ್ಥೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸ ಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕ್‍ಗಳಲ್ಲಿ ವಿಸರ್ಜಿಸುವುದು ಎಂದು ತಿಳಿಸಿದರು.

Translate »