ಮೈಸೂರು,ಸೆ.4(ಎಸ್‍ಬಿಡಿ)- ಮೈಸೂರು ನಗರಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾ ವಣೆಗೆಇನ್ನೊಂದು ದಿನ ಬಾಕಿ ಇದ್ದು, ಮೂರು ಪಕ್ಷ ಗಳು ಪ್ರತ್ಯೇಕವಾಗಿ ಸೋಮವಾರ ಮಹತ್ವದ ಸಭೆ ನಡೆಸಿ ಸ್ಪಷ್ಟ ನಿರ್ಧಾರ ಪ್ರಕಟಿಸುವ ಸಾಧ್ಯತೆಇದೆ.
ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಜಿಲ್ಲಾಉಸ್ತುವಾರಿ ಸಚಿವಎಸ್.ಟಿ. ಸೋಮಶೇಖರ್ ಸೋಮವಾರ ಮೈಸೂರಿಗೆ ಆಗಮಿಸ ಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯಬಹುದು. ಇನ್ನು ಪಾಲಿಕೆ ಚುನಾವಣೆಜವಾಬ್ದಾರಿ ಹೊಂದಿರುವಜೆಡಿಎಸ್ ಶಾಸಕ ಸಾ.ರಾ. ಮಹೇಶ್, ಕಾಂಗ್ರೆಸ್ ಹಾಗೂ ಬಿಜೆಪಿ ನಡೆಯನ್ನು ಆಧರಿಸಿ ತಮ್ಮ ನಿಲುವನ್ನು ಪಕ್ಷದ ವರಿಷ್ಠರಿಗೆರವಾನಿಸಬಹುದು. ಶನಿವಾರಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಪ್ರತ್ಯೇಕ ಸಭೆ ನಡೆಸಿ ಮೇಯರ್‍ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.
ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷಆರ್.ಧ್ರುವನಾರಾಯಣ್ ನೇತೃತ್ವದಲ್ಲಿಕಾಂಗ್ರೆಸ್ ಶಾಸಕರು, ಮುಖಂಡರು, ಕಾರ್ಪೊರೇಟರ್‍ಗಳ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ನಂತರ ಸಭೆಯತೀರ್ಮಾನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದು, ಅವರೊಂದಿಗೆಚರ್ಚೆ ನಡೆಸುವ ಸಾಧ್ಯತೆಇದೆ. ಅಂತಿಮವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವಿಚಾರ ತಿಳಿಸಿ ಅಂತಿಮವಾಗಿ ನಿರ್ಣಯ ಕೈಗೊಳ್ಳಬಹುದುಎನ್ನಲಾಗಿದೆ. ಜಿಲ್ಲಾಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‍ಅಧ್ಯಕ್ಷತೆಯಲ್ಲಿ ಬಿಜೆಪಿ ಮುಖಂಡರ ಸಭೆ ನಡೆಯಲಿದೆ.
ಬಿಜೆಪಿ ರಾಜ್ಯಘಟಕದಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನ, ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಅನೇಕ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮುಂಬರುವ ವಿಧಾನಸಭಾಚುನಾವಣೆದೃಷ್ಟಿಯಿಂದ ಸೂಕ್ತ ನಿರ್ಧಾರಕೈಗೊಂಡು ಪಾಲಿಕೆ ಸದಸ್ಯರಿಗೆ ಸೂಚನೆ ನೀಡುವ ಸಾಧ್ಯತೆಇದೆ.
ಕಾಂಗ್ರೆಸ್ ಹಾಗೂ ಬಿಜೆಪಿ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವಜೆಡಿಎಸ್, ಎಚ್ಚರಿಕೆಯಿಂದ ಮುಂದುವರೆಯಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಶಾಸಕ ಸಾ.ರಾ. ಮಹೇಶ್ ಸೋಮವಾರ ಸಭೆ ನಡೆಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇ ಗೌಡ, ಪಕ್ಷದ ಪದಾಧಿಕಾರಿಗಳು, ಮೇಯರ್ ಆಕಾಂಕ್ಷಿಗಳು ಸೇರಿದಂತೆಎಲ್ಲಾ ಸದಸ್ಯರಅಭಿಪ್ರಾಯ ಸಂಗ್ರಹಿಸಿ, ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿಅವರಿಗೆ ಮಾಹಿತಿರವಾನಿಸಲಿದ್ದಾರೆ. ಅಗತ್ಯವೆನಿಸಿದರೆ ಕುಮಾರಸ್ವಾಮಿಯವರೇ ಮೈಸೂರಿಗೆ ಆಗಮಿಸಿ ಅಂತಿಮ ಸುತ್ತಿನ ಸಭೆ ನಡೆಸಿ, ನಿರ್ಧಾರ ಪ್ರಕಟಿಸುವ ಸಾಧ್ಯತೆಯೂಇದೆಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಒಟ್ಟಾರೆ ಮೈಸೂರು ನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್‍ಚುನಾವಣೆಕುತೂಹಲಕಾರಿಘಟ್ಟತಲುಪಿದೆ. ಈ ಹಿಂದಿನ ವರ್ಷಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿಯುವ ಸಲುವಾಗಿ ಜೆಡಿಎಸ್ ಬೆನ್ನೇರುತ್ತಿದ್ದವು. ಕಡೇಕ್ಷಣದವರೆಗೂ ಮೈತ್ರಿಗಾಗಿಕಸರತ್ತು ನಡೆಯುತ್ತಿತ್ತು. ನಂತರವೂ ಮೇಯರ್ ಹಾಗೂ ಉಪಮೇಯರ್ ಸ್ಥಾನ ಯಾರಿಗೆಎನ್ನುವ ನಿರ್ಧಾರಕ್ಕೂ ಪೈಪೋಟಿ ನಡೆಯುತ್ತಿತ್ತು. ಆದರೆ ಈ ಬಾರಿಯ ಪರಿಸ್ಥಿತಿ ಸ್ವಲ್ಪ ಭಿನ್ನವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಮೂರ್ನಾಲ್ಕು ದಿನಗಳ ಮುಂಚೆಯೇ ಸ್ವತಂತ್ರ ಸ್ಪರ್ಧೆಗೆ ನಿರ್ಧರಿಸಿ, ಜೆಡಿಎಸ್ ಪಕ್ಷವೇ ಮೈತ್ರಿಗೆದುಂಬಾಲು ಬೀಳಲಿ ಎನ್ನುವ ನಿರೀಕ್ಷೆಯಲ್ಲಿವೆ. ಒಂದು ವೇಳೆ ಜೆಡಿಎಸ್‍ತಟಸ್ಥ ನಿಲುವು ತಳೆದರೆ ಚುನಾವಣಾಅಖಾಡದಲ್ಲಿಗೆಲ್ಲುವುದಕ್ಕೆಇರುವಎಲ್ಲಾ ಅವಕಾಶಗಳನ್ನು ಗಟ್ಟಿ ಮಾಡಿಕೊಳ್ಳುವ ಪ್ರಯತ್ನವನ್ನೂ ನಡೆಸಿವೆ. ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಲುರಹಸ್ಯತಂತ್ರಗಾರಿಕೆಯನ್ನೂ ಹೆಣೆಯುತ್ತಿವೆ.