ಕೊರೊನಾ ಹೆಚ್ಚಾದರೆ ಓಪನ್ ಆಸ್ಪತ್ರೆ ಆರಂಭ
ಮೈಸೂರು

ಕೊರೊನಾ ಹೆಚ್ಚಾದರೆ ಓಪನ್ ಆಸ್ಪತ್ರೆ ಆರಂಭ

May 25, 2020

ಬಳ್ಳಾರಿ, ಮೇ 24- ರಾಜ್ಯದಲ್ಲಿ ಜೂನ್ ಮತ್ತು ಜುಲೈ ನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವ ಮುನ್ಸೂ ಚನೆ ಇದ್ದು, ಎಲ್ಲ ಜಿಲ್ಲೆ ಗಳಲ್ಲಿ ಓಪನ್ ಆಸ್ಪತ್ರೆಗಳನ್ನು ಆರಂ ಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತ ನಾಡಿದ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈದಾನ, ಕ್ರೀಡಾಂಗಣದಂತಹ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಇಂತಹ ಮುಕ್ತ ಆಸ್ಪತ್ರೆ ವ್ಯವಸ್ಥೆಗೆ ಸಿದ್ಧತೆ ನಡೆಸ ಲಾಗುತ್ತಿದೆ. ಈ ಬಗ್ಗೆ ಕಾರ್ಯಪಡೆ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳ ಲಾಗುವುದು. ಗ್ರಾಮೀಣ ಭಾಗಕ್ಕೆ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಎಂಬಿಬಿಎಸ್ ವೈದ್ಯರಂತೆ ಆಯುಷ್ ವೈದ್ಯರ ವೇತನ ತಾರತಮ್ಯ ನಿವಾರಿಸುವ ಕುರಿತು ಮಂಗಳವಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿ.ಶ್ರೀರಾಮುಲು ಹೇಳಿದರು.

Translate »