ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಮೈಸೂರು ಪೊಲೀಸ್ ಆಯುಕ್ತರ ಕಚೇರಿಯ ಭವ್ಯ ಕಟ್ಟಡ ಉದ್ಘಾಟನೆ
ಮೈಸೂರು

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಮೈಸೂರು ಪೊಲೀಸ್ ಆಯುಕ್ತರ ಕಚೇರಿಯ ಭವ್ಯ ಕಟ್ಟಡ ಉದ್ಘಾಟನೆ

November 25, 2020

ಮೈಸೂರು,ನ.24(ವೈಡಿಎಸ್)- ಮೈಸೂರಿನ ನಜರ್ ಬಾದ್‍ನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಾಣವಾಗಿ ರುವ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡ ಹಾಗೂ ಪೊಲೀಸ್ ಗೃಹ 2020 ಯೋಜನೆಯಡಿ ನಿರ್ಮಿ ಸಿರುವ 108 ವಸತಿಗೃಹಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಉದ್ಘಾಟಿಸಿದರು.

ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ನಂತರ ಮಾತ ನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮೈಸೂರು ನಗರ ಪೊಲೀಸ್ ಘಟಕದ ಎಲ್ಲಾ ಹಂತದ ಅಧಿಕಾರಿ, ಸಿಬ್ಬಂದಿ ಅಪರಾಧರಹಿತ ಕಾನೂನು ಮತ್ತು ಸುವ್ಯವಸ್ಥೆ ಯಿಂದ ಕೂಡಿದ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸ ಬೇಕು. ಹಾಗೆಯೇ ಸಾರ್ವಜನಿಕರಿಗೆ ಉತ್ತಮ ರಕ್ಷಣೆ, ಅಪ ರಾಧ ತಡೆ ಮತ್ತು ಪತ್ತೆಕಾರ್ಯದಲ್ಲಿ ಪ್ರಾಮಾಣಿ ಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಸರ್ಕಾರದ ಜವಾಬ್ದಾರಿ: ಸಮಾಜದಲ್ಲಿ ಸಾರ್ವಜನಿಕರು ಯಾವುದೇ ಭೀತಿಯಿಲ್ಲದೆ ಶಾಂತಿಯಿಂದ ನೆಲೆಸಲು, ಅಪರಾಧ ರಹಿತವಾದ ಉತ್ತಮ ಕಾನೂನು ಮತ್ತು ಸುವ್ಯವಸ್ಥೆ ಕಲ್ಪಿಸು ವುದು ಸರ್ಕಾರದ ಮೊದಲ ಜವಾಬ್ದಾರಿ. ಈ ಕಾರ್ಯದಲ್ಲಿ ಪೊಲೀಸ್ ಇಲಾಖೆ ಪಾತ್ರ ಅತ್ಯಂತ ಮಹತ್ತರವಾಗಿದೆ. ಮೈಸೂರು ನಗರ ಪೊಲೀಸರಿಂದ ಹೆಚ್ಚಿನ ಜನಪರವಾದ, ಗುಣಾತ್ಮಕವಾದ, ವೃತ್ತಿಪರ, ಪಾರದರ್ಶಕ ಹಾಗೂ ಜವಾಬ್ಧಾರಿ ಯುತ ಕರ್ತವ್ಯವನ್ನು ಸರ್ಕಾರ ಬಯಸುತ್ತದೆ ಎಂದರು.

ಮೂಲಭೂತ ಸೌಕರ್ಯಕ್ಕೆ ಒತ್ತು: ಮೈಸೂರು ನಗರ ಪೊಲೀಸರ ಕಾರ್ಯ ಕ್ಷಮತೆಯನ್ನು ವೃದ್ಧಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಮೂಲಭೂತ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಪೆÇಲೀಸರು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗು ವಂತೆ ಸುಸಜ್ಜಿತ ಹಾಗೂ ಮೂಲಭೂತ ಸೌಕರ್ಯದಿಂದ ಕೂಡಿದ ಪೆÇಲೀಸ್ ಠಾಣೆ ಹಾಗೂ ಕಚೇರಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಆಧುನಿಕ ವಿನ್ಯಾಸದ ವಸತಿಗೃಹ: ಕರ್ನಾಟಕ ಪೆÇಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ನಿಗಮದ ಮೂಲಕ ಆಧುನಿಕ ವಿನ್ಯಾಸದ ವಸತಿ ಗೃಹ ವನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗುತ್ತಿದೆ. ಮೈಸೂರಿನ ಜ್ಯೋತಿ ನಗರದಲ್ಲಿ 36 ಹಾಗೂ ಜಾಕಿ ಕ್ವಾರ್ಟಸ್ ನಲ್ಲಿ 72 ವಸತಿ ಗೃಹಗಳು ಮೂಲಭೂತ ಸೌಕರ್ಯ ದಿಂದ ಕೂಡಿದೆ. ಪೆÇಲೀಸ್ ಗೃಹ 2020 ಯೋಜನೆ ಯಡಿ ಈ ವಸತಿ ಸಮುಚ್ಚಯ ನಿರ್ಮಾಣಕ್ಕೆ 20.31 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

184 ವಸತಿ ನಿರ್ಮಾಣ: ಪ್ರಸ್ತುತ ಪೆÇಲೀಸ್ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಪೆÇಲೀಸ್ ವಸತಿಗೃಹಗಳಲ್ಲಿ ಸ್ಥಳಾ ವಕಾಶದ ಕೊರತೆ ಇರುವುದನ್ನು ಸರ್ಕಾರ ಮನಗಂಡು ಪೆÇಲೀಸ್ ಗೃಹ-2020ನೇ ಯೋಜನೆಯಡಿ 184 ವಸತಿಗೃಹ ಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದರು.

ನಗರ ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ: ಕೋವಿಡ್-19 ನಿಯಂತ್ರಣದಲ್ಲಿ ರಾಜ್ಯ ಪೆÇಲೀಸ್ ಇಲಾಖೆಯು ಹೆಚ್ಚಿನ ಜವಬ್ದಾರಿಯಿಂದ ಕಾರ್ಯನಿರ್ವ ಹಿಸಿದೆ. ಕೊರೊನಾ ಸೋಂಕು ಹೆಚ್ಚು ಹರಡುತ್ತಿದ್ದ ವೇಳೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜತೆಗೆ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಮೈಸೂರು ನಗರ ಪೆÇಲೀಸರು ಉತ್ತಮವಾಗಿ ಕಾರ್ಯನಿರ್ವ ಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

4-5 ವಾರದಲ್ಲಿ ಔಷಧಿ ಸಿಗಬಹುದು: ಕೋವಿಡ್ ಹಿನ್ನೆಲೆ ಯಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದರ ಕುರಿತು ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಚರ್ಚಿಸಿದ್ದಾರೆ. ಇನ್ನೂ 4-5 ವಾರಗಳಲ್ಲಿ ಕೊರೊನಾ ಲಸಿಕೆ ಸಿಗಬಹುದು ಎಂದು ಹೇಳಿದ್ದಾರೆ. ಮೈಸೂರಲ್ಲಿ ಹೆಚ್ಚಿದ್ದ ಕೋವಿಡ್ ಪ್ರಕರಣ ಗಳು ಇಂದು ತಹಬದಿಗೆ ಬಂದಿದೆ. ಹಾಗೆಂದು ಮೈಮರೆ ಯದೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸ ಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕೆಂದು ಮನವಿ ಮಾಡಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರ ಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೊಮ ಶೇಖರ್, ಸಂಸದ ಪ್ರತಾಪಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ತನ್ವೀರ್‍ಸೇಠ್, ಎಲ್. ನಾಗೇಂದ್ರ, ಅಡಗೂರು ಹೆಚ್.ವಿಶ್ವನಾಥ್, ಕೆ.ಟಿ.ಶ್ರೀಕಂಠೇ ಗೌಡ, ಕೆ.ಮಹದೇವ್, ಬಿ.ಹರ್ಷವರ್ಧನ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ರಾಜ್ಯ ಪೆÇಲೀಸ್ ಮಹಾ ನಿರ್ದೇಶಕ ಪ್ರವೀಣ್‍ಸೂದ್, ನಗರ ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್‍ಪಿ ಸಿ.ಬಿ.ರಿಷ್ಯಂತ್, ನಗರಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಮೇಯರ್ ತಸ್ನೀಂ, ಜಿಪಂ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಇನ್ನಿತರರು ಉಪಸ್ಥಿತರಿದ್ದರು.