ವಾರದಲ್ಲಿ 3 ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಕೊಡಗು

ವಾರದಲ್ಲಿ 3 ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

April 27, 2020

ಮಡಿಕೇರಿ,ಏ.26- ಕೋವಿಡ್-19 ಸಂಬಂಧ ಸರ್ಕಾರದ ಆದೇಶದಂತೆ ದೇಶಾದ್ಯಂತ ಲಾಕ್‍ಡೌನ ಜಾರಿಯಾಗಿದ್ದು, ಕೊಡಗು ಜಿಲ್ಲೆಯಲ್ಲೂ ನಿರ್ಬಂಧಕಾಜ್ಞೆ ಜಾರಿಯಲ್ಲಿದೆ. ಈ ಅವಧಿ ಯಲ್ಲಿ ದಿನಸಿ, ಹಣ್ಣು ಹಂಪಲು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟಕ್ಕೆ ವಾರದ ಮೂರು ದಿನಗಳಲ್ಲಿ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಮಯ ನಿಗದಿಪಡಿಸಲಾಗಿತ್ತು. ಸಾರ್ವಜನಿಕ ಹಿತಾಸಕ್ತಿಯಿಂದ ಈ ಸಮಯಾ ವಕಾಶವನ್ನು ವಿಸ್ತರಿಸುವುದು ಸೂಕ್ತವೆಂದು ಕಂಡು ಬಂದ ಕಾರಣ ವಾರದ ಮೂರು ದಿನಗಳಲ್ಲಿ ಅಂದರೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ದಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿಸ್ತರಿಸಲಾಗಿದೆ. ಉಳಿದಂತೆ ಯಾವುದೇ ಬದ ಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.

Translate »