ಬೆಮೆಲ್ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ವಾರ ಕಾಲ ಪ್ರತಿಭಟನೆ ಆರಂಭ
ಮೈಸೂರು

ಬೆಮೆಲ್ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ವಾರ ಕಾಲ ಪ್ರತಿಭಟನೆ ಆರಂಭ

February 16, 2021

ಮೈಸೂರು,ಫೆ.15(ಪಿಎಂ)-ಸಾರ್ವಜನಿಕ ಉದ್ದಿಮೆಯಾದ ಬೆಮೆಲ್ (ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್) ಅನ್ನು ಖಾಸಗೀಕರಣಗೊಳಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ಬೆಮೆಲ್‍ನ ಮೈಸೂರು ಉತ್ಪಾ ದನಾ ಘಟಕದ ಕಾರ್ಮಿಕರು ಸೋಮ ವಾರ ಪ್ರತಿಭಟನೆ ಆರಂಭಿಸಿದರು.

ಭಾರತ್ ಅರ್ಥ್ ಮೂವರ್ಸ್ ಎಂಪ್ಲಾ ಯಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಕಾರ್ಮಿಕರು ಇಂದಿನಿಂದ 6 ದಿನಗಳ ಕಾಲ ಪ್ರತಿದಿನ ಮಧ್ಯಾಹ್ನ 2.30ರಿಂದ 3.30ರವ ರೆಗೆ ಪ್ರತಿಭಟನೆ ನಡೆಸಲು ಮುಂದಾಗಿ ದ್ದಾರೆ. ಅಂತೆಯೇ ಇಂದು ಹೂಟಗಳ್ಳಿ-ಕೆಆರ್‍ಎಸ್ ರಸ್ತೆಯ ಕಾರ್ಖಾನೆ ಮುಖ್ಯ ದ್ವಾರದಲ್ಲಿ 600ಕ್ಕೂ ಹೆಚ್ಚು ಕಾರ್ಮಿಕರು ಜಮಾಯಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಉದ್ದಿಮೆಯಾದ ಬೆಮೆಲ್ ಸಂಸ್ಥೆಯು 1964ರಲ್ಲಿ ಮಾತೃಸಂಸ್ಥೆಯಾದ ಹೆಚ್‍ಎಎಲ್‍ನಿಂದ ಬೇರ್ಪಟ್ಟು ರೈಲು ಕೋಚ್‍ಗಳ ಉತ್ಪಾದನೆ ಹಾಗೂ ಬಿಡಿಭಾಗ ಗಳ ಪೂರೈಕೆಗಾಗಿ ಬೆಂಗಳೂರಿನಲ್ಲಿ ಸ್ಥಾಪನೆ ಗೊಂಡಿತು. ನಂತರ ಕೆಜಿಎಫ್, ಮೈಸೂರು ಹಾಗೂ ಪಾಲಕ್ಕಾಡ್‍ನಲ್ಲಿ ಉತ್ಪಾದನಾ ಘಟಕಗಳನ್ನು ವಿಸ್ತರಿಸುವ ಜೊತೆಗೆ ರಕ್ಷಣೆ, ರೈಲು, ಮೆಟ್ರೋ, ಗಣಿಗಾರಿಕೆ ಮತ್ತು ಮೂಲ ಸೌಕರ್ಯ ಹಾಗೂ ಏರೋಸ್ಪೇಸ್ ವಲಯ ಗಳಿಗೆ ಅಗತ್ಯವಾದ ಯಂತ್ರ ಮತ್ತು ವಾಹನ ಗಳನ್ನು ಉತ್ಪಾದಿಸುತ್ತಿದೆ. ದೇಶಾದ್ಯಂತ ಮಾರಾಟ ಜಾಲ ಹೊಂದಿ ಉತ್ಕøಷ್ಟ ಸೇವೆ ನೀಡುತ್ತಿರುವ ಸಂಸ್ಥೆಯನ್ನು ಇದೀಗ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಲು ಮುಂದಾ ಗಿದ್ದು, ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರಾರಂಭದಿಂದಲೂ ಲಾಭದಾಯಕವಾಗಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರಕ್ಕೆ ತೆರಿಗೆ ಹಾಗೂ ಲಾಭಾಂಶ ರೂಪದಲ್ಲಿ ಸಾವಿರಾರು ಕೋಟಿ ರೂ.ಗಳನ್ನು ನೀಡುವುದರ ಜೊತೆಗೆ ಷೇರುದಾರರಿಗೆ ಪ್ರತಿವರ್ಷ ಡಿವಿಡೆಂಡ್ ಪಾವತಿ ಮಾಡುತ್ತಾ ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿದೆ. ಬೆಮೆಲ್ ಮೈಸೂರು ಘಟಕವು 1984ರಲ್ಲಿ ಪ್ರಾರಂಭಗೊಂಡು ಸುಮಾರು 700 ಎಕರೆ ಪ್ರದೇಶದಲ್ಲಿ ಟ್ರಕ್, ಇಂಜಿನ್ ಹಾಗೂ ಏರೋ ಸ್ಪೇಸ್ ವಿಭಾಗಗಳನ್ನು ಹೊಂದಿದೆ. ಸದ್ಯ ಬೆಮೆಲ್ ಸಂಸ್ಥೆಯಲ್ಲಿ ಕೇಂದ್ರ ಸರ್ಕಾರವು ಶೇ.54.03ರಷ್ಟು ಷೇರು ಬಂಡವಾಳ ಹೊಂದಿದ್ದು, 2016ರ ನವೆಂಬರ್‍ನಲ್ಲಿ ಕೇಂದ್ರ ಸಚಿವ ಸಂಪುಟದ ಅನುಮೋದನೆ ಮೇರೆಗೆ ಶೇ.26ರಷ್ಟು ಷೇರನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಕ್ರಿಯೆ ಆರಂಭಿಸಿ, ಅದರ ಮುಂದುವರೆದ ಭಾಗವಾಗಿ ಸಂಸ್ಥೆಯ ಆಡಳಿತ ನಿರ್ವಹಣೆಯನ್ನು ಖಾಸಗಿಯವ ರಿಗೆ ವಹಿಸಲು ಸಿದ್ಧತೆ ನಡೆಸಿದ್ದು, ಇದು ಖಂಡ ನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಿಗೆ ಮಣೆ ಹಾಕಲು ಹೊರಟಿರುವ ಕೇಂದ್ರ ಸರ್ಕಾರದ ನಡೆ ಖಂಡನಾರ್ಹ. ಸರ್ಕಾರದ ಇಂತಹ ನಿಲುವಿನಿಂದ ದೇಶದ ಸಮಗ್ರತೆ ಹಾಗೂ ಭದ್ರತೆಗೆ ಧಕ್ಕೆಯಾಗಲಿದೆ. ಜೊತೆಗೆ ದೇಶದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ಕಿಡಿಕಾರಿದರು. ಬೆಮೆಲ್ ಸಂಸ್ಥೆ ಯಲ್ಲಿ ಪ್ರಸ್ತುತ 13 ಸಾವಿರ ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು, ಖಾಸಗಿಕರಣದಿಂದ ಉದ್ಯೋಗ ಭದ್ರತೆಗೆ ಧಕ್ಕೆ ಉಂಟಾಗಲಿದೆ. ಅಲ್ಲದೆ, ಮೀಸಲಾತಿ ಆಧಾರದ ನೇಮಕ ಪ್ರಕ್ರಿಯೆಗಳು ಸ್ಥಗಿತಗೊಂಡು ಸಾಮಾಜಿಕ ನ್ಯಾಯ ಮರೀಚಿಕೆಯಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೆ ಸಂಸ್ಥೆಯನ್ನು ಖಾಸಗೀ ಕರಣ ಮಾಡಬಾರದು ಎಂದು ಒತ್ತಾಯಿಸಿ ದರು. ಭಾರತ್ ಅರ್ಥ್ ಮೂವರ್ಸ್ ಎಂಪ್ಲಾ ಯಿಸ್ ಅಸೋಸಿಯೇಷನ್ ಅಧ್ಯಕ್ಷ ಹೆಚ್.ವೈ. ಮುನಿರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ.ಡಿ.ರಾಜಶೇಖರಮೂರ್ತಿ, ಉಪಾ ಧ್ಯಕ್ಷ ಗೋವಿಂದರೆಡ್ಡಿ, ಕಾರ್ಯದರ್ಶಿ ಸುರೇಶ್, ಖಜಾಂಚಿ ಜಗದೀಶ್ ಸೇರಿದಂತೆ 600ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »