ಶಾಶ್ವತ ಸಮಿತಿ ರಚನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
ಮೈಸೂರು

ಶಾಶ್ವತ ಸಮಿತಿ ರಚನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

December 23, 2020

ಬೆಂಗಳೂರು,ಡಿ.22(ಕೆಎಂಶಿ)-ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಯಲ್ಲಿ ಉಂಟಾಗಿರುವ ಸಮಸ್ಯೆ ನಿವಾರಣೆಗೆ ಹಿರಿಯ ಸಚಿವರ ಶಾಶ್ವತ ಸಮಿತಿ ರಚಿಸು ವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ನೌಕರರ ಹಿತ ಕಾಪಾಡುವಂತೆ ಆಗ್ರಹಿಸಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರ ಅನೇಕ ವರ್ಷಗಳಿಂದ ಸಮಸ್ಯೆಯಾಗಿ ಕಾಡುತ್ತಿದೆ. ಈ ಹಿಂದಿನ ಕಾಯ್ದೆಗಳಲ್ಲಿನ ನ್ಯೂನತೆಗಳಿಂದಾಗಿ ನ್ಯಾಯಾಲಯ ಗಳೂ ಸಮಸ್ಯೆಗೆ ಪರಿಹಾರ ದೊರಕಿಸಲು ಹಲವು ವರ್ಷ ಬೇಕಾಯಿತು. ಸರ್ವೋಚ್ಛ ನ್ಯಾಯಾಲ ಯದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ 15 ಕ್ಕೂ ಹೆಚ್ಚು ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಗ ಗಳ ಹಿತಾಸಕ್ತಿ ಕಾಪಾಡುವ ಉದ್ದೇಶ ದಿಂದ 2017ರಲ್ಲಿ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆ” ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳ ಅಂಕಿತವೂ ದೊರೆತಿದೆ. ಸರ್ವೋಚ್ಛ ನ್ಯಾಯಾಲಯವೂ ಕಾಯ್ದೆಯನ್ನು ಎತ್ತಿ ಹಿಡಿದಿದೆ. ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ನೌಕರರ ಬಗೆಗಿನ ನಿರ್ಲಕ್ಷ್ಯ ಧೋರಣೆಯಿಂದಾಗಿ ಸಮಸ್ಯೆಗಳು ಉದ್ಭವಿಸುತ್ತಿವೆ. ಲೋಕೋ ಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ, ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿಶಾಮಕ, ಕೃಷಿ, ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿ ಯರನ್ನು ಕಡೆಗಣಿಸಲಾಗಿದೆ ಎಂದು ಟೀಕಿಸಿದ್ದಾರೆ. ನೇರ ನೇಮಕಾತಿ ಮತ್ತು ಬ್ಯಾಕ್‍ಲಾಗ್ ನೇಮಕಾತಿ ಆದವ ರಿಗೂ ಹಲವು ಸಮಸ್ಯೆಗಳಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳು ನೇಮಕಾತಿಯಲ್ಲಿ ಮೆರಿಟ್ ಕಾರಣಕ್ಕೆ ಸಾಮಾನ್ಯ ಕೋಟಾದಡಿ ಆಯ್ಕೆ ಆಗಿದ್ದರೆ ಅಂತವರಿಗೆ ಬಡ್ತಿ ನಿರಾಕರಿಸುವುದು ಅಸಂವಿ ಧಾನಿಕ ವರ್ತನೆಯಾಗುತ್ತದೆ ಎಂದಿದ್ದಾರೆ. ಪ್ರಸ್ತುತ ಸಮಸ್ಯೆ ಗಳ ಕುರಿತು ಚರ್ಚಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರ ಸಂಘದ ಪದಾಧಿಕಾರಿಗಳ ಸಭೆ ಯನ್ನು ತುರ್ತಾಗಿ ಕರೆದು ಸಹಾನುಭೂತಿಯಿಂದ ಪರಿ ಶೀಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಳ್ಳಂದೂರು ಭೂ ಡಿ ನೋಟಿಫಿಕೇಷನ್ ಪ್ರಕರಣ: ಬಿಎಸ್‍ವೈಗೆ ಮತ್ತೆ ಸಂಕಷ್ಟ
ಬೆಂಗಳೂರು,ಡಿ.22-ಬೆಳ್ಳಂದೂರು ಭೂ ಡಿ ನೋಟಿಫಿಕೇಷನ್ ಪ್ರಕ ರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಪ್ರಕ ರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾ.ಜಾನ್ ಮೈಕೆಲ್ ಕುನ್ಹಾ ನೇತೃ ತ್ವದ ಪೀಠ ಅರ್ಜಿ ವಜಾಗೊಳಿಸಿದೆ. ಅರ್ಜಿ ಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಅರ್ಜಿ ವಜಾ ಗೊಳಿಸಿದೆ. ಇದರಿಂದ ಮುಖ್ಯಮಂತ್ರಿಗಳು ಮತ್ತೊಮ್ಮೆ ತೊಂದರೆಗೆ ಸಿಲುಕಿದ್ದಾರೆ.

ಬೆಳ್ಳಂದೂರು ಡಿ ನೋಟಿಫಿಕೇಷನ್ ಸಂಬಂಧ 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಈ ಕುರಿತು ಖಾಸಗಿ ದೂರು ದಾಖಲಿಸಿದ್ದರು. ಕೆಐಎಡಿಬಿ ಬೆಳ್ಳಂದೂರಿ ನಲ್ಲಿ ಭೂಸ್ವಾಧೀನ ಮಾಡಿದೆ ಎಂದು ಅವರು ಆರೋಪಿಸಿದರು. ಈ ಪ್ರಕರಣವನ್ನು ಲೋಕಾ ಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇ ಶಿಸಿತ್ತು. 2015ರಲ್ಲಿ ಲೋಕಾಯುಕ್ತ ಪೆÇಲೀ ಸರು ಎಫ್‍ಐಆರ್ ದಾಖಲಿಸಿದ್ದರು. ಆರ್.ವಿ ದೇಶಪಾಂಡೆ ವಿರುದ್ಧದ ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಸುಪ್ರೀಂಕೋರ್ಟ್ ಕೂಡಾ ಆದೇಶ ಎತ್ತಿಹಿಡಿದಿತ್ತು.

Translate »