ಹಿಂದುಳಿದ ವರ್ಗಕ್ಕೆ ಮುಸ್ಲಿಮರ ಸೇರ್ಪಡೆಗೆ ವಿರೋಧ
ಮೈಸೂರು

ಹಿಂದುಳಿದ ವರ್ಗಕ್ಕೆ ಮುಸ್ಲಿಮರ ಸೇರ್ಪಡೆಗೆ ವಿರೋಧ

December 17, 2020

ಮೈಸೂರು, ಡಿ.16(ಆರ್‍ಕೆಬಿ)- ಹಿಂದುಳಿದ ವರ್ಗಕ್ಕೆ ಮುಸ್ಲಿಮರನ್ನು ಸೇರ್ಪಡೆ ಮಾಡುವುದಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ ಹಿಂದು ಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಲಕ್ಷ್ಮಣ್ ಹೇಳಿದರು.

ಮೈಸೂರಿನಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದ ಬಡವರಿಗೆ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಚಿಂತಿಸಿದೆ ಎಂದು ಹೇಳಿದರು.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ 6 ವರ್ಷಗಳ ಅವಧಿಯಲ್ಲಿ ಹಿಂದು ಳಿದ ವರ್ಗದ 70,000 ವಿದ್ಯಾರ್ಥಿಗಳು ಕೇಂದ್ರೀಯ ವಿದ್ಯಾಲಯ, ಕಾನೂನು ವಿದ್ಯಾ ಲಯ, ನವೋದಯ ವಿದ್ಯಾಲಯ ಶಾಲೆ ಹಾಗೂ ಸೈನಿಕ ಶಾಲೆಗಳಲ್ಲಿ ಪ್ರವೇಶ ಪಡೆದಿ ದ್ದಾರೆ. ಇದು ಹಿಂದುಳಿದ ವರ್ಗದ ವಿದ್ಯಾರ್ಥಿ ಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಕ್ಕೆ ನಿದರ್ಶನ ಎಂದರು.

ಕೇಂದ್ರ ಸರ್ಕಾರ ಹಿಂದುಳಿದವರಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿ ಗೊಳಿಸಿದೆ. ದೇಶ ಅಭಿವೃದ್ಧಿಯತ್ತ ಕೊಂಡೊ ಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ ಒಂದು ಮಾರು ಕಟ್ಟೆ ಕಲ್ಪನೆಯೊಂದಿಗೆ ರೂಪಿಸಿರುವ ಹೊಸ ಕೃಷಿ ನೀತಿಗಳು ರೈತರಿಗೆ ಆರ್ಥಿಕ ಲಾಭ ತಂದುಕೊಟ್ಟಿವೆ. ಆದರೆ ರೈತಪರ ಕಾಯ್ದೆ ಗಳ ಬಗ್ಗೆ ರೈತರನ್ನು ದಿಕ್ಕು ತಪ್ಪಿಸುವ ಕೆಲಸ ವನ್ನು ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ಮಾಡುತ್ತಿವೆ. ಇದರ ಹಿಂದೆ ಕೆಲವು ಪಟ್ಟ ಭದ್ರ ಶಕ್ತಿಗಳ ಕೈವಾಡವೂ ಇದೆ ಎಂದು ಆರೋಪಿಸಿದರು. ಬಿಜೆಪಿ ಮುಂಬರುವ ದಿನಗಳಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳಲ್ಲಿ ಪ್ರಬಲವಾಗಿ, ಅಧಿಕಾರ ಹಿಡಿಯಲಿದೆ ಎಂದರು. ಸುದ್ದಿಗೋಷ್ಠಿ ಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರ ಬಾಬು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ಎಸ್.ಎ. ರಾಮದಾಸ್, ಎಲ್.ನಾಗೇಂದ್ರ, ಪಕ್ಷದ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂ ತರ (ಜಿಲ್ಲಾ) ಅಧ್ಯಕ್ಷೆ ಮಂಗಳಾ ಸೋಮ ಶೇಖರ್, ಪಕ್ಷದ ಮೈಸೂರು ಗ್ರಾಮಾಂ ತರ ಜಿಲ್ಲಾ ಮಾಧ್ಯಮ ಸಂಚಾಲಕ ಎನ್. ರಾಜಕುಮಾರ್, ನಗರ ಮಾಧ್ಯಮ ಸಂಚಾಲಕ ಮಹೇಶ್‍ರಾಜೇ ಅರಸ್ ಇನ್ನಿತರರು ಉಪಸ್ಥಿತರಿದ್ದರು.

Translate »