224 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ನಮ್ಮದು
ಮೈಸೂರು

224 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ನಮ್ಮದು

October 16, 2020

ಮೈಸೂರು, ಅ.15(ಆರ್‍ಕೆಬಿ)- ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳನ್ನೂ ಗೆಲ್ಲುವ ಗುರಿಯೊಂ ದಿಗೆ ಮುಂದಡಿ ಇಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದರು.

ಮೈಸೂರಿನ ಹೋಟೆಲ್ ಪ್ರೆಸಿಡೆಂಟ್ ಸಭಾಂಗಣ ದಲ್ಲಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾ ಟಿಸಿ, ಅವರು ಮಾತನಾಡಿದರು. ರಾಜ್ಯದ 224 ಸ್ಥಾನಗಳನ್ನು ಹಿಡಿಯಲು ತಾಯಿ ಚಾಮುಂಡೇ ಶ್ವರಿಯ ಸನ್ನಿಧಿ ಮೈಸೂರಿನಲ್ಲಿ ರಾಜ್ಯ ಪದಾಧಿಕಾರಿ ಗಳ ಸಭೆಯ ಮೂಲಕ ಯಾತ್ರೆ ಆರಂಭಿಸಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಮತ್ತಷ್ಟು ಗಟ್ಟಿಗೊಳಿಸುವುದು ನಮ್ಮ ಗುರಿ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಉಪ ಚುನಾ ವಣೆಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದ ಅವರು, ಇದಕ್ಕಾಗಿ ನಮ್ಮ ಪಕ್ಷದ ಕಾರ್ಯಪಡೆ ನಿಷ್ಠೆಯಿಂದ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ಕಾರ್ಯಕರ್ತ ಸಮಾಜಮುಖಿ ಕಾರ್ಯದಲ್ಲಿ ತೊಡಗಿ ದ್ದಾರೆ. `ಸೇವೆಯೇ ಸಂಘಟನೆ’ ಘೋಷಣೆಯಡಿ ಸಮಾಜ ಮೆಚ್ಚುವ ಕೆಲಸಗಳನ್ನು ಮಾಡಿದ್ದಾರೆ. ಲಾಕ್‍ಡೌನ್ ಸಂದರ್ಭ ರಾಜ್ಯದ 1,68,000 ಮನೆ ಗಳಿಗೆ, 68 ಲಕ್ಷ ಕುಟುಂಬಗಳಿಗೆ ಆಹಾರದ ಪೊಟ್ಟಣಗಳನ್ನು ನೀಡಿ ಜನಮೆಚ್ಚುಗೆ ಪಡೆದಿ ದ್ದಾರೆ. ಹೀಗಾಗಿ ರಾಜ್ಯದ ಜನರಿಗೆ ಬಿಜೆಪಿ ಬಗ್ಗೆ ಭಾರೀ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ವಿಚಾರ ಪ್ರಸ್ತಾಪಿಸಿದ ಅವರು, ತಮ್ಮದೇ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರ ಮನೆಯನ್ನೇ ರಕ್ಷಣೆ ಮಾಡಲಾಗದ ಸ್ಥಿತಿಕಾಂಗ್ರೆಸ್‍ನದ್ದಾಗಿದೆ. ತಮ್ಮದೇ ಪಕ್ಷದ ಶಾಸಕ ಬೆಂಕಿ ಹಚ್ಚಿದಾಗ ಆತನನ್ನು ಬಂಧಿಸಿ ಎಂದು ಹೇಳದೆ ಆತನ ರಕ್ಷಣೆಗೆ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು. ಇಂತಹ ಕಾಂಗ್ರೆಸ್ ಚುನಾವಣೆಯನ್ನು ಎದುರಿಸುವುದಾದರು ಹೇಗೆ? ಎಂದು ಪ್ರಶ್ನಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ನಮ್ಮ ಪಕ್ಷ ಚುನಾವಣೆ ಎದುರಿಸುತ್ತದೆ. ನಮ್ಮ ಪಕ್ಷದ ಹಿರಿಯರ ಸಾಧನೆ, ಕಾರ್ಯಕ್ರಮಗಳ ಮೂಲಕವೇ ಬಿಜೆಪಿಯನ್ನು ಸಂಘಟಿಸಿದ್ದೇವೆ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲೂ ಪಂಚಾಯಿತಿ ಸಮಾವೇಶಗಳ ಮೂಲಕ ನಮ್ಮ ಕಾರ್ಯಕರ್ತರು ಹಳ್ಳಿ ಹಳ್ಳಿಗೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಕೊಂಡೊಯ್ಯಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್‍ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಹೆಚ್.ವಿಶ್ವನಾಥ್, ಹರ್ಷವರ್ಧನ್, ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಪಿ.ಅರುಣ್‍ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಸೇರಿದಂತೆ ರಾಜ್ಯದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕೋಶಾಧ್ಯಕ್ಷರು, ವಕ್ತಾರರು, ಪ್ರಕೋಷ್ಠಗಳ ರಾಜ್ಯ ಸಂಯೋಜಕರು ಮತ್ತು ವಿವಿಧ ಮೋರ್ಚಾ ಅಧ್ಯಕ್ಷರು ಇನ್ನಿತರರು ಇದ್ದರು.