ಮೈಸೂರು, ಜು.21(ಎಂಟಿವೈ)- ರಾಜ್ಯ ಸರ್ಕಾರ ಜಾರಿ ಗೊಳಿಸಿದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋ ಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಸಾಮೂಹಿಕ ನಾಯಕತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದ ವೇಳೆ ಗೆಜೆಟ್ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ ಟಿ.ರಾಮೇ ಗೌಡ ಮಾತನಾಡಿ, ಪ್ರತಿವರ್ಷ ಜುಲೈ 21ರಂದು ರೈತ ಹುತಾತ್ಮ ದಿನ ಆಚರಿಸುತ್ತಿದ್ದೆವು. ಆದರೆ ಈ ಬಾರಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಹುತಾತ್ಮ ದಿನ ಆಚರಿ ಸುತ್ತಿಲ್ಲ. ಬದಲಾಗಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೇವೆ ಎಂದರು.
ಬಂಡವಾಳಶಾಹಿಗಳು, ಬಹುರಾಷ್ಟ್ರೀಯ ಕಂಪೆನಿ ಗಳಿಗೆ ಅನುಕೂಲವಾಗಲೆಂದೇ ಸರ್ಕಾರ ಕಾಯ್ದೆಯಲ್ಲಿ ಬದಲಾವಣೆ ಮಾಡಿದೆ. ಕಾಯ್ದೆ ತಿದ್ದುಪಡಿಯಿಂದಾಗಿ ಸಣ್ಣಪುಟ್ಟ ರೈತರು ಜಮೀನು ಕಳೆದುಕೊಳ್ಳಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಏಕಾಏಕಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದನ್ನು ವಿರೋಧಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಧರಣಿ ನಡೆಸಿ, ಮನವಿಪತ್ರ ಸಲ್ಲಿಸಿದ್ದೇವೆ. ನಮ್ಮ ಹೋರಾಟಕ್ಕೆ ಸೂಕ್ತ ಪ್ರತಿಕ್ರಿಯೆ ಬಾರದೆ ಹೋದರೆ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವಕ್ಕೆ ಬದಲು `ಕರಾಳ ದಿನ’ ಆಚ ರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರ ರೈತರ ಕೂಗು ಕೇಳಿಸಿಕೊಳ್ಳದ ಸ್ಥಿತಿಗೆ ತಲುಪಿದೆ. ಜೂನ್‍ನಿಂದ ರೈತ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸಿದ್ದರೂ ಸರ್ಕಾರ ರೈತ ಮುಖಂಡರನ್ನು ಕರೆದು ಅಭಿಪ್ರಾಯ ಕೇಳಿಲ್ಲ. ಕೊರೊನಾ ಸಂದರ್ಭ ವನ್ನೇ ಬಳಸಿಕೊಂಡು ಸರ್ಕಾರ ತಿದ್ದುಪಡಿ ಕಾಯ್ದೆ ಜಾರಿ ಮಾಡಿದೆ. ಇದನ್ನು ವಿರೋಧಿಸಿಯೇ ರಾಜ್ಯಾ ದ್ಯಂತ ರೈತರು ಬೀದಿಗಿಳಿದು ಹೋರಾಟ ಮಾಡು ತ್ತಿದ್ದಾರೆ. ಮುಂದೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ರೈತ ಮುಖಂಡರಾದ ಎಸ್.ರಘು ಹಿಮ್ಮಾವು, ಮಂಜು, ಕಿರಣ್, ಕಳ್ಳಿಪುರ ಮಹದೇವ ಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.