ಮೈಸೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತದ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 2ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕುಕ್ಕರಹಳ್ಳಿ ಕೆರೆ ಉದ್ಯಾನವನದ ಆವರಣದಲ್ಲಿ ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ವಿಷಯ ಕುರಿತು ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಸ್ಪರ್ಧೆಯ ವಿಷಯ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಯಿರಿಯಾಗಿರುತ್ತದೆ. ಚಿತ್ರಕಲಾ ಸ್ಪರ್ಧೆಯಲ್ಲಿ 1 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಮೈಸೂರು ನಗರ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣ ಸಂಖ್ಯೆ 0821-2519411 ಅನ್ನು ಸಂಪರ್ಕಿಸಿ.