ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಪುತ್ರಿ ಮರ್ಯಮ್ ಅವರಿಗೆ ಏಳು ವರ್ಷ ಶಿಕ್ಷೆ ವಿಧಿಸಿ ನ್ಯಾಷನಲ್ ಅಕೌಂಟಬಿಲಿಟಿ ಬ್ಯೂರೊ(ಎನ್ಎಬಿ) ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ಲಂಡನ್ನಲ್ಲಿ ನಾಲ್ಕು ಐಷಾರಾಮಿ ಫ್ಲಾಟ್ಗಳನ್ನು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಹಾಗೂ ಪುತ್ರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪನಾಮ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ನವಾಜ್ ಷರೀಫ್ ಅವರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ನವಾಜ್ ಷರೀಫ್ ಅವರು ಅಕ್ರಮ ಸಂಪಾದನೆ ಮತ್ತು ತೆರಿಗೆ ವಂಚನೆಯಿಂದ ಗಳಿಸಿದ ಕಪ್ಪು ಹಣವನ್ನು ಅಂತರಾಷ್ಟ್ರೀಯ ಬ್ಯಾಂಕ್ಗಳಲ್ಲಿ ಹಾಗೂ ಲಂಡನ್ ಸೇರಿದಂತೆ ಹಲವು ದೇಶಗಳಲ್ಲಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿರುವುದನ್ನು ಪನಾಮ ಪೇಪರ್ಸ್ ಲೀಕ್ ಮಾಡಿತ್ತು.