ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಪ್ರಶಸ್ತಿಯ ಗರಿ: ಸಿಎಂಯಿಂದ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕಾರ
ಕೊಡಗು

ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಪ್ರಶಸ್ತಿಯ ಗರಿ: ಸಿಎಂಯಿಂದ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕಾರ

October 5, 2018

ಸಿದ್ದಾಪುರ: ಜಿಲ್ಲೆಯ ಮಾದರಿ ಗ್ರಾಮ ಪಂಚಾಯಿತಿಯಾಗಿ ಇದುವರೆಗೂ ರಾಷ್ಟ್ರ ರಾಜ್ಯ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡು ಅತ್ಯುತ್ತಮ ಸಾಧನೆ ಮಾಡಿರುವ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಮೂರನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಗಾಂಧೀಜಿಯವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮ ಬೆಂಗಳೂರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ, ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ನೆರವು ನೀಡಲು ಐದು ಲಕ್ಷ ರೂಪಾಯಿಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಪತ್ರವನ್ನು ಮುಖ್ಯ ಮಂತ್ರಿಯವರಿಗೆ ಅಧ್ಯಕ್ಷ ಪುಲಿಯಂಡ ಬೋಪಣ್ಣ ನೀಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಆಡಳಿತಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಶಿವಾಜಿ ನಗರ ಶಾಸಕ ರೋಷನ್ ಬೇಗ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ಸಾವಿತ್ರಿ, ನಿರ್ದೇಶಕ ಕೆಂಪೇಗೌಡರು, ಕೊಡಗು ಜಿಪಂ ಉಪ ಕಾರ್ಯದರ್ಶಿ ಗೂಡೂರು ಭೀಮಸೇನಾ, ಸೇರಿದಂತೆ ವಿವಿಧ ಜಿಲ್ಲೆಗಳ ಅಧಿಕಾರಿಗಳು ಹಾಗೂ ಪ್ರಶಸ್ತಿ ಪುರಸ್ಕೃತ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಅಭಿ ವೃದ್ಧಿ ಅಧಿಕಾರಿಗಳು ಹಾಜರಿದ್ದರು.

Translate »