ಪ್ಯಾರಾ ಮೆಡಿಕಲ್ ಸೇವೆ ವೈದ್ಯರ ಸೇವೆಗೆ ಸಮ
ಮೈಸೂರು

ಪ್ಯಾರಾ ಮೆಡಿಕಲ್ ಸೇವೆ ವೈದ್ಯರ ಸೇವೆಗೆ ಸಮ

December 24, 2019

ಮೈಸೂರು,ಡಿ.23- ಪ್ಯಾರಾ ಮೆಡಿಕಲ್ ವೈದ್ಯಕೀಯ ಸೇವೆ ವೈದ್ಯರಿಗೆ ಸರಿಸಮ ವಾದ ಸೇವೆಯಾಗಿದ್ದು, ವೈದ್ಯರ ಚಿಕಿತ್ಸೆ ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ಸಲಹೆಯನ್ನು ಅವಲಂಬಿಸಿರುವುದರಿಂದ ಇವರುಗಳ ಸೇವೆ ಬಹು ಉತ್ಕøಷ್ಟ ಎಂದು ಸುಯೋಗ್ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಇಂದಿಲ್ಲಿ ಅಭಿಪ್ರಾಯಪಟ್ಟರು.

ನಗರದ ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ದಾಸ್ತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಸೋಮವಾರ ಏರ್ಪ ಡಿಸಿದ್ದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ, ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾ ರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿಶ್ವ ಆರೋಗ್ಯ ಸಂಸ್ಥೆಯ ಪ್ಯಾರಾ ಮೆಡಿ ಕಲ್ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಕೋರ್ಸ್‍ಗಳನ್ನು ಪದವಿ ಮತ್ತು ಸ್ನಾತಕೋತ್ತರ ಮಟ್ಟಕ್ಕೆ ಉನ್ನತೀ ಕರಿಸಿ ಅತ್ಯಾಧುನಿಕ ಜ್ಞಾನವನ್ನು ಸಂಬಂ ಧಿಸಿದ ವಿದ್ಯಾರ್ಥಿಗಳಿಗೆ ನೀಡುವಂತೆ ಎಲ್ಲಾ ದೇಶಗಳಿಗೆ ಕರೆ ನೀಡಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ವಿಶ್ವವಿದ್ಯಾನಿಲಯಗಳು ಪ್ಯಾರಾ ಮೆಡಿಕಲ್‍ಗಳಿಗೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‍ಗಳನ್ನು ತೆರೆಯ ಲಾಗಿದ್ದು, ಈ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡ ಲಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ.ಡಿ.ತಿಮ್ಮಯ್ಯ ಮಾತನಾಡಿ, ಸಂಸ್ಥೆಯು ಯಾವುದೇ ಲಾಭಾ ಪೇಕ್ಷೆ ಇಲ್ಲದೆ ಕೆಲಸ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರಲ್ಲದೆ. ವಿದ್ಯಾರ್ಥಿ ಗಳು ಹೆಚ್ಚಿನ ಜ್ಞಾನಗಳಿಸುವ ಮೂಲಕ ತಮ್ಮ ಭವಿಷ್ಯವನ್ನು ಹಸನಾಗಿಸಿಕೊಳ್ಳಬೇಕೆಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಡಾ.ಎಂ. ಜಿ.ಆರ್. ಅರಸ್, ಎನ್.ಅನಂತ್, ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

Translate »