ಕಾರ್ಯಕರ್ತರು ಪಕ್ಷ, ಜನರ  ನಂಬಿಕೆ ಸೇತುವೆಯಾಗಬೇಕು
ದೇಶ-ವಿದೇಶ, ಮೈಸೂರು

ಕಾರ್ಯಕರ್ತರು ಪಕ್ಷ, ಜನರ ನಂಬಿಕೆ ಸೇತುವೆಯಾಗಬೇಕು

November 8, 2021

ನವದೆಹಲಿ,ನ.೭-ಎರಡು ವರ್ಷದ ನಂತರ ಬಿಜೆಪಿ ರಾಷ್ಟೀಯ ಕಾರ್ಯಕಾರಿಣಿ ಸಭೆ ಭಾನುವಾರ ನವ ದೆಹಲಿಯಲ್ಲಿ ನಡೆಯಿತು. ವರ್ಚುವಲ್ ಸ್ವರೂಪ ದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವರು, ರಾಷ್ಟೀಯ ಕಾರ್ಯಕಾರಿಣಿ ಸದಸ್ಯರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ರಾಷ್ಟೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತ ನಾಡಿದ ಪ್ರಧಾನಿ ಮೋದಿ, ಬಿಜೆಪಿ ಕುಟುಂಬ ಸುತ್ತ ಸುತ್ತುವ ಪಕ್ಷವಲ್ಲ. ಇದು ಸಾಮಾನ್ಯ ಜನರೊಂದಿಗೆ ಸಂಪರ್ಕ ಹೊಂದಿರುವ ಪಕ್ಷ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರು ಸಾಮಾನ್ಯ ಜನರು ಮತ್ತು ಪಕ್ಷದ ನಂಬಿಕೆಯ ಸೇತುವೆಯಾಗಬೇಕು, ಪಂಚ ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು ಎಂದು ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.

ಕಾರ್ಯಕರ್ತರು ಜನರು ಮತ್ತು ಪಕ್ಷದ ನಡುವೆ ನಂಬಿಕೆಯ ಸೇತುವೆಯಾಗಬೇಕು. ಪಕ್ಷದ ಇತಿಹಾಸ ವನ್ನು ಉಲ್ಲೇಖಿಸುವ ಸಂದರ್ಭದಲ್ಲಿ ಸಮರ್ಪಕ ವಾಗಿ ಜನರ ಮುಂದೆ ತಿಳಿಸಬೇಕು. ಪಕ್ಷವು ಜನರ ಜೊತೆ ನಿಕಟ ಸಂಬಂಧ ಹೊಂದಿದೆ ಎಂಬುದನ್ನು ಮನವರಿಕೆ ಮಾಡಬೇಕೆಂದು ಮೋದಿ ಹೇಳಿದರು. ಬಿಜೆಪಿಯು ಸಾರ್ವಜನಿಕ ಕಲ್ಯಾಣ ಸಂಸ್ಕೃತಿಯಿಂದ ನಡೆಯು ತ್ತಿದೆ. ಪಕ್ಷವು ಸೇವಾ, ನಿರ್ಣಯ ಮತ್ತು ಬದ್ಧತೆ ಮೌಲ್ಯ ಗಳ ಮೇಲೆ ನಿಂತಿದೆ ಎಂದು ಮೋದಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭೆ ಹಾಗೂ ಲೋಕ ಸಭೆ ಉಪಚುನಾವಣೆಗಳ ಫಲಿತಾಂಶದ ಬಗ್ಗೆಯೂ ಚರ್ಚೆ ನಡೆದಿದ್ದು, ಮುಂದಿನ ವರ್ಷ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯ ಗಳಲ್ಲಿ ಪಕ್ಷ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬು ದನ್ನು ಕಾರ್ಯಕಾರಿಣಿಯಲ್ಲಿ ಅಧ್ಯಯನ ಮಾಡ ಲಾಯಿತು ಎಂದ ಭೂಪೇಂದ್ರ ಯಾದವ್, ಮುಂಬ ರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪಕ್ಷ ಸಜ್ಜಾಗಿದೆ ಎಂದರು. ಮುಂದಿನ ವರ್ಷ ಚುನಾ ವಣೆ ನಡೆಯಲಿರುವ ರಾಜ್ಯಗಳಲ್ಲಿ ಪಂಜಾಬ್ ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಹಾಗೂ ಪಂಜಾಬ್‌ನಲ್ಲಿ ಅಧಿಕಾರವನ್ನು ಕಾಂಗ್ರೆಸ್ ತೆಕ್ಕೆಯಿಂದ ಬಿಜೆಪಿಗೆ ಪಡೆಯುವ ಬಗ್ಗೆಯೂ ಕಾರ್ಯಕಾರಿಣಿಯಲ್ಲಿ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಪ್ರಧಾನಿ ಮೋದಿ ಮುಂದಿನ ೧೫ ದಿನಗಳಲ್ಲಿ ೩ ಬಾರಿ ಹಾಗೂ ಗೃಹ ಸಚಿವ ಅಮಿತ್ ಶಾ ೨ ಬಾರಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈ ವೇಳೆ ಪ್ರಧಾನಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೂ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಇಂದು ನಡೆದ ರಾಷ್ಟೀಯ ಕಾರ್ಯಕಾರಿಣಿಯು ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಣ ಕಹಳೆ ಮೊಳಗಿದೆ ಎಂದೇ ಹೇಳಬಹುದಾಗಿದೆ. ರಾಷ್ಟೀಯ ಕಾರ್ಯಕಾರಿಣಿಯಲ್ಲಿ ಕರ್ನಾಟಕದಿಂದ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸಂಸದ ಉಮೇಶ್ ಜಾಧವ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷö್ಮಣ ಸವದಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಭಾಗವಹಿಸಿದ್ದರು.

Translate »