ಪೆÇೀಕ್ಸೋ ಪ್ರಕರಣ: ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ
News

ಪೆÇೀಕ್ಸೋ ಪ್ರಕರಣ: ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ

November 8, 2022

ಚಿತ್ರದುರ್ಗ: ಮುರುಘಾ ಮಠ ಶ್ರೀಗಳ ವಿರುದ್ಧ ದಾಖಲಾಗಿರುವ ಪೆÇೀಕ್ಸೋ ಪ್ರಕ ರಣಕ್ಕೆ ಸಂಬಂಧಿಸಿದಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಪ್ರಕರಣದ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಪೆÇೀಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್‍ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯ ದರ್ಶಿ ಪರಮಶಿವಯ್ಯ ವಿರುದ್ಧ ಚಾರ್ಜ್‍ಶೀಟ್‍ನಲ್ಲಿ ಆರೋಪಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.

ಮಠದಲ್ಲಿ ಕೊಲೆ ಆರೋಪ: ಅಲ್ಲದೇ ಕೆಲ ವರ್ಷದ ಹಿಂದೆ ಮಠದಲ್ಲಿ ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಸಹ ಆಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರ ಪ್ರದೇಶಕ್ಕೆ ತೆರಳಿದ್ದ ಪೆÇಲೀಸ್ ತಂಡ ಹಲವು ಮಾಹಿತಿ ಗಳನ್ನು ಕಲೆ ಹಾಕಿದೆ. ಮಠದ ಹಾಸ್ಟೆಲ್‍ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಶ್ರೀಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಚಿತ್ರದುರ್ಗ ಎಸ್ಪಿ ಪರಶುರಾಮ್, ಅಕ್ಟೋಬರ್ 27 ರಂದೇ ತನಿಖಾಧಿಕಾರಿ ಅನಿಲ್ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್‍ನ ಸಿಸಿ ನಂಬರ್ ಬರುವುದು ಬಾಕಿಯಿದೆ. ಈ ಮಧ್ಯೆ, ಡಾ.ಶಿವಮೂರ್ತಿ ಮುರುಘಾ ಶರಣರು, ವಾರ್ಡನ್ ರಶ್ಮಿ ಮತ್ತು ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್‍ಪಿ ಹೇಳಿದ್ದಾರೆ. ಆದರೆ, ಮಠದ ಉತ್ತರಾಧಿಕಾರಿ ಮತ್ತು ಗಂಗಾಧರಯ್ಯ ಇವರಿಬ್ಬರ ವಿರುದ್ಧ ಆರೋಪಗಳಿಗೆ ಈವರೆಗೆ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಸಾಕ್ಷ್ಯಾಧಾರ ಸಂಗ್ರಹಿಸಿ ಅಂತಿಮ ಚಾರ್ಜ್‍ಶೀಟ್ ಸಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಮುರುಘಾಶ್ರೀ ವಿರುದ್ಧ 2ನೇ ಫೆÇೀಕ್ಸೋ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತರ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತರ ಪೆÇೀಷಕರ ಹೇಳಿಕೆಗಳನ್ನೂ ದಾಖಲಿಸ ಲಾಗಿದೆ. ಮುರುಘಾಶ್ರೀ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತರ ಹೇಳಿಕೆ ಆಧರಿಸಿ ಕೆಲವು ಬಾಲಕಿಯರ ಹೇಳಿಕೆ ಪಡೆದಿದ್ದೇವೆ ಎಂದು ಅವರು ಹೇಳಿದ್ದಾರೆ.

ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ದಾಖಲಾಗಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರನ್ನು ಕರೆಸಿ ಮಾಹಿತಿ ಕೇಳಿದ್ದೇವೆ. ಸಂತ್ರಸ್ತರು ಮಾಹಿತಿ ನೀಡಿದರೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದೇವೆ. ಒಡನಾಡಿ ಸಂಸ್ಥೆ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ತನಿಖೆ ನಡೆಸುವುದಾಗಿ ಮನವಿ ಮಾಡಿದ್ದೇವೆ. ಕೆಲ ಮಾಹಿತಿಯನ್ನು ಒಡನಾಡಿ ಸಂಸ್ಥೆಯವರು ನೀಡಿದ್ದಾರೆ. ಮಾಹಿತಿ ಆಧಾರದ ಮೇಲೆ ನಾವು ತನಿಖೆಗೆ ತೆರಳಿದ್ದೆವು. ಆದರೆ ಸಂತ್ರಸ್ತ ಬಾಲಕಿ ಆ ಸ್ಥಳದಲ್ಲಿ ಸಿಕ್ಕಿಲ್ಲ. ಒಡನಾಡಿ ಸಂಸ್ಥೆಯವರಿಗೂ ಈ ಬಗ್ಗೆ ತಿಳಿಸಿದ್ದೇವೆ. ಸಂತ್ರಸ್ತೆಯರ ಮಾಹಿತಿ ಸಿಕ್ಕರೆ ಖಂಡಿತ ತನಿಖೆ ನಡೆಸುತ್ತೇವೆ ಎಂದು ಎಸ್ಪಿ ಹೇಳಿದರು.

ಮೊದಲ ಪ್ರಕರಣದ ಸಂತ್ರಸ್ತರು ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಆಗಿದೆ ಎಂದಿದ್ದರು. ಆದರೆ ಆಂಧ್ರ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಘಟಿಸಿದ್ದು ತಿಳಿದಿದೆ. ರೈಲಿನಿಂದ ಬಿದ್ದು ಸಾವನ್ನಪ್ಪಿರುವ ವರದಿ ಆಗಿದೆ. ಇನ್ನು, ಮಠದಲ್ಲಿ ಡ್ರಗ್ಸ್ ಬಳಕೆ ಆರೋಪ ವಿಚಾರ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ, ಎಲ್ಲಾ ಮಾಹಿತಿ ಹೇಳಲಾಗದು. ವೈದ್ಯಕೀಯ ಪರೀಕ್ಷೆಯ ಕೆಲ ವರದಿ ಇನ್ನೂ ಬರಬೇಕಿದೆ ಎಂದು ಅವರು ಹೇಳಿದರು.

Translate »