ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರು, ಉಗುಳುವವರಿಗೆ ದಂಡ
ಮೈಸೂರು

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರು, ಉಗುಳುವವರಿಗೆ ದಂಡ

April 28, 2020

ಮೈಸೂರು, ಏ.27(ಎಸ್‍ಬಿಡಿ)- ಸಾರ್ವಜನಿಕ ಸ್ಥಳದಲ್ಲಿ ಉಗುಳುವವರು ಹಾಗೂ ಮಾಸ್ಕ್ ಧರಿಸದವರಿಗೆ ಏ.30ರಿಂದ ದಂಡ ವಿಧಿಸಲು ಮೈಸೂರು ಮಹಾನಗರಪಾಲಿಕೆ ನಿರ್ಧರಿಸಿದೆ. ಕೊರೊನಾ ನಿಯಂತ್ರಣಕ್ಕೆ ನಗರಪಾಲಿಕೆ ಸಾಕಷ್ಟು ಮುಂಜಾಗ್ರತೆ ವಹಿಸಿದ್ದು, ಕಚೇರಿ, ಕಾರ್ಖಾನೆ, ಸಾರ್ವಜನಿಕ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೆ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರು ಹಾಗೂ ಉಗುಳುವವರಿಗೆ ದಂಡ ವಿಧಿಸುವುದಾಗಿ ಎಚ್ಚರಿಸಲಾಗಿದೆ.

ಆದರೂ ಕೆಲವರು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವು ದರಿಂದ ಇತರೆ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುತ್ತಿದೆ. ಅಲ್ಲದೆ ಸೋಂಕು ಹರಡುವ ಭೀತಿಯೂ ಎದುರಾಗಿದೆ. ಆದ್ದರಿಂದ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಿದ ಬಳಿಕ, ಏ.30ರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರು ಹಾಗೂ ಎಲ್ಲೆಂದರಲ್ಲಿ ಉಗುಳುವವರಿಗೆ ಪೊಲೀಸರ ಸಹಕಾರದಿಂದ 100 ರೂ. ತಂಡ ವಿಧಿಸಲಾಗುವುದು. ಮೇಲ್ವಿಚಾರಣೆಗಾಗಿ ಎಲ್ಲಾ ವಲಯಗಳಲ್ಲೂ ತಂಡ ರಚಿಸಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನಗರಪಾಲಿಕೆ ಆಯುಕ್ತ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Translate »