ಮೇ 19ರಿಂದ ತೆರಿಗೆ ಪಾವತಿಸಬಹುದು ನಗರಪಾಲಿಕೆ ಆಯುಕ್ತ ಗುರುದತ್ ಹೆಗಡೆ
ಮೈಸೂರು

ಮೇ 19ರಿಂದ ತೆರಿಗೆ ಪಾವತಿಸಬಹುದು ನಗರಪಾಲಿಕೆ ಆಯುಕ್ತ ಗುರುದತ್ ಹೆಗಡೆ

May 16, 2020

ಮೈಸೂರು, ಮೇ 15- ಮೇ 19ರಿಂದ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಲಯ ಕಚೇರಿಗಳಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸ ಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದರು. ಕೊರೊನಾ ಸೋಂಕು ಮೈಸೂರು ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಗುಣ ವಾದ ನಿಟ್ಟಿನಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾಖೆಯ ಫೇಸ್‍ಬುಕ್ ಪೇಜ್‍ನಲ್ಲಿ ಮಾತನಾಡಿದ ಅವರು, ಮಂಗಳವಾರದಿಂದ ಆಸ್ತಿ ತೆರೆಗೆ ಪಾವತಿಸಬಹುದಾಗಿದ್ದು, ಜುಲೈವರೆಗೂ ತೆರಿಗೆ ಪಾವತಿಸಲು ಕಾಲಾವಾಶ ನೀಡಲಾಗಿದೆ. ಸಾರ್ವಜನಿಕರು ಜನದಟ್ಟಣೆಗೆ ಅವಕಾಶವಿಲ್ಲದಂತೆ ತೆರಿಗೆ ಪಾವತಿಸಬೇಕು. ಅಲ್ಲದೆ ನೀರಿನ ತೆರಿಗೆಯನ್ನು ಆನ್‍ಲೈನ್ ಮೂಲಕ ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಮೈಸೂರು ನಗರದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಮಾರಾಟ ಮಾಡಲು ಅನುವು ಮಾಡಿಕೊಡಲಾಗಿದೆ. ಅಂಗಡಿಯಲ್ಲಿ ಗ್ರಾಹಕರು ಸಾರ್ವಜನಿಕ ಅಂತರ ಕಾಯ್ದುಕೊಳ್ಳುವಂತೆ ಮಾಲೀಕರೇ ಎಚ್ಚರ ವಹಿಸಬೇಕು ಎಂದರು. ಇನ್ನು ಮುಂದೆಯೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದಂಡ ವಿಧಿಸುವ ಪದ್ಧತಿಯನ್ನು ಹೆಚ್ಚಿಸಲಾಗುವುದು ಎಂದರು.

Translate »