ಮೈಸೂರು: ಕೇಂದ್ರ ಮತ್ತು ಚಾಮುಂಡಿಪುರಂ ಉಪ ವಿಭಾಗದ ವ್ಯಾಪ್ತಿಯ ಗ್ರಾಹಕರಿಗೆ ಮೇ 26ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಉಪ-ವಿಭಾಗ ಕಚೇರಿಯಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ಚಾಮುಂಡಿಪುರಂ ಉಪ-ವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಲಾಗುವುದು. ಗ್ರಾಹಕರು ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳೇನಾ ದರೂ ಇದ್ದಲ್ಲಿ ಸಭೆಗೆ ಆಗಮಿಸಿ ಲಿಖಿತ ಅರ್ಜಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಚಾ.ವಿ.ಸ.ನಿ.ನಿ. ಕಾರ್ಯ ನಿರ್ವಾಹಕ ಇಂಜಿನಿ ಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.