ಮೈಸೂರು,ಫೆ.8- ಸರ್ಕಾರಿ ಸೌಲಭ್ಯ ಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಮಹಾರಾಜ ಕಾಲೇಜು ನಿವೃತ್ತ ಪ್ರಾಂಶುಪಾಲರೂ ಆದ ಮೈಸೂರು ವಿವಿ ಎನ್‍ಎಸ್‍ಎಸ್ ನಿವೃತ್ತ ಕಾರ್ಯಕ್ರಮ ಸಂಯೋಜನಾಧಿಕಾರಿ ಪೆÇ್ರ.ಕೆ.ಕಾಳಚನ್ನೇಗೌಡ ಕರೆ ನೀಡಿದರು.
ಡಿ ಪಾಲ್ ಪ್ರಥಮ ದರ್ಜೆ ಕಾಲೇಜು ಕೇರ್ಗಳ್ಳಿ ಗ್ರಾಮದಲ್ಲಿ ಏರ್ಪಡಿಸಿರುವ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಧವಾ ವೇತನ, ಅಂಗವಿಕಲರ ವೇತನ, ವೃದ್ಧಾಪ್ಯ ವೇತನ ಮೊದಲಾದವುಗಳನ್ನು ಹೇಗೆ ಪಡೆಯಬೇಕು ಎಂಬುದು ಜನರಿಗೆ ಗೊತ್ತಿರುವುದಿಲ್ಲ. ಅದನ್ನು ತಿಳಿಸುವುದರ ಜೊತೆಗೆ ಪ್ರತಿಯೊಂದು ಮನೆಗೂ ಭೇಟಿ ನೀಡಿ, ಸಾಮಾಜಿಕ ಆರ್ಥಿಕ ಮಾಹಿತಿ ಕಲೆ, ಆಸಕ್ತಿ, ಸ್ವಚ್ಛತೆ, ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ತಿಳಿಸಿ ಎಂದರು. ಮೈಸೂರು ಸುತ್ತಮುತ್ತ ಇರುವ ಹಳ್ಳಿಗಳಲ್ಲಿ ಶಿಕ್ಷಣ ಪ್ರಮಾಣ ಕಡಿಮೆ ಇದೆ. ಎಸ್‍ಎಸ್‍ಎಲ್‍ಸಿ, ಪಿಯುಸಿಗೆ ಓದು ನಿಲ್ಲಿಸಿದವರೇ ಹೆಚ್ಚು. ಆದ್ದರಿಂದ ಪ್ರತಿಯೊ ಬ್ಬರೂ ವಿದ್ಯಾವಂತರಾಗಿ ಮುಂದೆ ಬರ ಬೇಕು ಎಂದು ಸಲಹೆ ಮಾಡಿದರು.
ರುಡ್‍ಸೆಟ್ ಸಂಸ್ಥೆ, ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ ಯೋಜನೆಗಳ ಲಾಭ ಪಡೆದು ಯುವಕರು ಉದ್ಯೋಗ ಪಡೆಯ ಬೇಕು. ಆ ಮೂಲಕ ಸದೃಢ ಭಾರತ ನಿರ್ಮಾ ಣಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಪಂ ಸದಸ್ಯ ಬೀರಿಹುಂಡಿ ಬಸವಣ್ಣ ಮಾತನಾಡಿ, ಪೆÇೀಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುವ ಬದಲು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲಾ ಸೌಲಭ್ಯಗಳು ಉಚಿತವಾಗಿ ಸಿಗುತ್ತಿವೆ. ಇದರ ಲಾಭ ಪಡೆದು ವಿದ್ಯಾವಂತರಾಗಬೇಕು ಎಂದರು.
ಬೀರಿಹುಂಡಿ ಗ್ರಾಪಂ ಅಧ್ಯಕ್ಷ ಸಿ. ಬಸವೇಗೌಡ ಮಾತನಾಡಿ, ಸ್ವಚ್ಛ ಭಾರತ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿ ಎಂದರು. ಕಾಲೇಜಿನ ಪ್ರಾಂಶುಪಾಲೆ ಡಾ.ಸುಜಾತ ಬೋಪಣ್ಣ ಮಾತನಾಡಿದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ವಿಶೇಷ ಆಹ್ವಾನಿತರಾಗಿದ್ದರು. ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಸಿ.ಎಂ. ಜಾನಿ ಕೊಯಿಕರ ಅಧ್ಯಕ್ಷತೆ ವಹಿಸಿದ್ದರು. ಕೇರ್ಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೆ.ಬಿ.ಪುಟ್ಟರಾಜೇ ಗೌಡ, ಕಸ್ತೂರಬಾ ಬಾಲಕಿಯರ ಶಾಲೆಯ ಮುಖ್ಯ ಶಿಕ್ಷಕಿ ಪಿ.ಜಿ. ಸಂಕಲ್ಪ ರಾಜ್, ಎಸ್‍ಡಿಎಂಸಿ ಅಧ್ಯಕ್ಷ ಮಹೇಶ್, ಮಾಜಿ ಅಧ್ಯಕ್ಷ ಚಿಕ್ಕಣ್ಣ, ಗ್ರಾಪಂ ಸದಸ್ಯ ಶಿವಪ್ಪ ಮುಖ್ಯ ಅತಿಥಿಗಳಾಗಿದ್ದರು. ಶರಣ್, ವಿ.ಟಿ.ಮನು, ಸ್ಟೆಫಿ ಫರ್ನಾಂಡಿಸ್, ರೀನಾ, ಪಲ್ಲವಿ ಇತರರು ಉಪಸ್ಥಿತರಿದ್ದರು.
ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಬಿ.ಎನ್.ಹೇಮಲತಾ, ಕನ್ನಡ ವಿಭಾಗ ಸಹಾ ಯಕ ಪ್ರಾಧ್ಯಾಪಕ ಲಂಕೇಶ್ ದೇವನ್, ಜ್ಞಾನ ದೀಪ ಕಾಲೇಜಿನ ಎನ್‍ಎಸ್‍ಎಸ್ ಕಾರ್ಯ ಕ್ರಮಾಧಿಕಾರಿ ಸಿದ್ದಪ್ಪ ಉಪಸ್ಥಿತರಿದ್ದರು.