ಸಂಜೆ ಮಳೆಗೆ ಜನಜೀವನ ಅಸ್ತವ್ಯಸ್ತ
ಮೈಸೂರು

ಸಂಜೆ ಮಳೆಗೆ ಜನಜೀವನ ಅಸ್ತವ್ಯಸ್ತ

May 9, 2023

ಮೈಸೂರು, ಮೇ 8(ಎಂಕೆ)- ಮೈಸೂ ರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸೋಮವಾರ ತಡರಾತ್ರಿಯವರೆಗೂ ಸುರಿಯಿತು. ಸಂಜೆ 7 ಗಂಟೆ ಸುಮಾರಿಗೆ ಆರಂಭವಾದ ಮಳೆ ಸರಿರಾತ್ರಿವರೆಗೂ ಧೋ ಎಂದು ಸುರಿಯುತ್ತಲೇ ಇತ್ತು. ಪರಿ ಣಾಮ ರಸ್ತೆ-ಚರಂಡಿಗಳು ತುಂಬಿ ಹರಿ ದಿದ್ದು, ತಗ್ಗು ಪ್ರದೇಶಗಳು ಜಲಾವೃತವಾ ಗಿತ್ತು. ಎಡೆಬಿಡದೆ ಸುರಿದ ಮಳೆಯಿಂದಾಗಿ ಉಂಟಾದ ಟ್ರಾಫಿಕ್‍ನಿಂದಾಗಿ ವಾಹನ ಸವಾರರು, ಪ್ರವಾಸಿಗರು ಕಿರಿಕಿರಿ ಅನುಭವಿ ಸುವಂತಾಯಿತು. ನಗರದ ಹಾರ್ಡಿಂಜ್ ವೃತ್ತದಲ್ಲಿ ಮರದ ಕೊಂಬೆಯೊಂದು ಮುರಿದು ಬಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಾಲಿಕೆ ಅಭಯ ತಂಡ ದವರು ಕೊಂಬೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಮಳೆ ನಿರಂತರವಾಗಿ ಸುರಿಯು ತ್ತಿದ್ದರೂ ಗುಡುಗು-ಮಿಂಚು ಹಾಗೂ ಗಾಳಿಯ ವೇಗ ಕಡಿಮೆ ಇರುವುದರಿಂದ ಯಾವುದೇ ತೊಂದರೆಯಾಗಿಲ್ಲ. ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಕುರಿತು ವರದಿಯಾಗಿಲ್ಲ ಎಂದು ನಗರಪಾಲಿಕೆ ಕಂಟ್ರೋಲ್ ರೂಂ ಸಿಬ್ಬಂದಿ ತಿಳಿಸಿದ್ದಾರೆ.

Translate »