ಜಿಲ್ಲಾಧಿಕಾರಿಗಳಂತೆ ಇತರರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ
ಮೈಸೂರು

ಜಿಲ್ಲಾಧಿಕಾರಿಗಳಂತೆ ಇತರರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ

August 17, 2020

ಮೈಸೂರು, ಆ.16(ಆರ್‍ಕೆ)- ಕೊರೊನಾ ಸೋಂಕಿತರ ಸಾವು ತಡೆಗಟ್ಟಲು ಜಿಲ್ಲಾಧಿಕಾರಿಗಳಂತೆ ಸಂಬಂಧಪಟ್ಟ ಇಲಾಖೆಗಳ ಇತರ ಅಧಿಕಾರಿಗಳೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖಡಕ್ ಸೂಚನೆ ನೀಡಿದರು.

ಮೈಸೂರು ಜಿಪಂ ಸಭಾಂಗಣದಲ್ಲಿ ಶನಿವಾರ ಕೋವಿಡ್ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿತ ರಂತೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕ ಕಾರಿ ವಿಷಯ. ಪ್ರತಿದಿನ ನೆಗೆಟಿವ್ ರಿಪೋರ್ಟ್ ಬರುತ್ತಿದೆ ಯಾದರೂ ಅದೇ ಪ್ರಮಾಣದಲ್ಲಿ ಸೋಂಕು ದೃಢಪಡುತ್ತಿರು ವವರ ಸಂಖ್ಯೆಯೂ ಹೆಚ್ಚಾಗುತ್ತಿರುವುದರ ಬಗ್ಗೆ ಹಾಗೂ ಸಾವು ಕಡಿಮೆಯಾಗದಿರುವ ಬಗ್ಗೆ ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೇವಲ ಜಿಲ್ಲಾಧಿಕಾರಿಗಳು ಮಾತ್ರ ಕ್ಷಿಪ್ರ ರೀತಿಯಲ್ಲಿ ಕೆಲಸ ಮಾಡಿದರೆ ಸಾಲದು. ಅಧಿಕಾರಿ ಗಳೂ ತಮ್ಮ ಮಂದಗತಿ ಧೋರಣೆ ಬಿಟ್ಟು ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಇಂತಹ ನಿಧಾನಗತಿ ಧೋರಣೆಯನ್ನು ನಾನು ಸಹಿ ಸುವುದಿಲ್ಲ. ಅಧಿಕಾರಿಗಳೇ ಸ್ವಯಂಪ್ರೇರಿತರಾಗಿ ಇಂತಹ ಸಭೆಗಳಲ್ಲಿ ಕೋವಿಡ್ ನಿರ್ವಹಣೆಗೆ ಯಾವ ಕ್ರಮ ಕೈಗೊಳ್ಳ ಬೇಕು, ಏನೇನು ಸಮಸ್ಯೆಗಳಿವೆ ಎಂಬುದರ ಬಗ್ಗೆ ಮಾಹಿತಿ ನೀಡಬೇಕು. ಎಲ್ಲರೂ ಸೇರಿ ಕೆಲಸ ಮಾಡಿದರೆ ಮಾತ್ರ ಜಿಲ್ಲಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ. ಕೋವಿಡ್ ಆಸ್ಪತ್ರೆ ಗಳಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ಸೋಂಕಿತರಿಗೆ ಬಿಸಿ ನೀರು, ಆಹಾರ ಹಾಗೂ ಸ್ವಚ್ಛತೆ ಸೌಲಭ್ಯವನ್ನು ಸರಿಯಾಗಿ ಒದಗಿಸುತ್ತಿಲ್ಲ ಎಂಬ ದೂರುಗಳು ಶಾಸಕರಿಂದ ಹಾಗೂ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಇಂತಹ ಸಂದರ್ಭದಲ್ಲಿ ನಿಮಗೆ ಈ ಸಮಸ್ಯೆ ಪರಿಹರಿ ಸಲು ಇರುವ ತೊಂದರೆ ಏನೆಂದು ಮುಕ್ತವಾಗಿ ತಿಳಿಸ ಬೇಕು. ಆಗ ಮಾತ್ರ ಪರಿಹಾರ ಕಂಡುಹಿಡಿಯಲು ಸಾಧ್ಯ ಎಂದು ಸಚಿವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಮೈಸೂರಿನ ಜಯನಗರದಲ್ಲಿ 7 ವರ್ಷದ ಹಿಂದೆ ನಿರ್ಮಾಣ ವಾದ ಚಿತಾಗಾರ ಇನ್ನೂ ಬಳಕೆಯಾಗುತ್ತಿಲ್ಲ. ಇದರ ಬಗ್ಗೆ ನಾನು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಾಗ್ಯೂ ಈವರೆವಿಗೆ ಅದನ್ನು ಬಳಸಲು ಅವಕಾಶ ನೀಡುತ್ತಿಲ್ಲ ಎಂದು ಶಾಸಕ ಎಲ್.ನಾಗೇಂದ್ರ ಅವರು ಸಭೆಯಲ್ಲಿ ದೂರು ನೀಡಿದರು. ಈ ಕುರಿತಂತೆ ಮೈಸೂರು ಮಹಾ ನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ಜಯಂತ್ ಅವರು ನಾಳೆಯೇ ಇಂಜಿನಿಯರ್ ಜೊತೆ ಸ್ಥಳಕ್ಕೆ ಭೇಟಿ ನೀಡಿ ಸಣ್ಣಪುಟ್ಟ ರೀಪೇರಿಗಳಿದ್ದರೆ ನಿರ್ವಹಿಸಿ ಚಿತಾಗಾರಕ್ಕೆ ಚಾಲನೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ಕೊರೊನಾ ಸೋಂಕಿತರನ್ನು ದಾಖಲಿಸಿಕೊಳ್ಳಲು ಕೆಲ ಖಾಸಗಿ ಆಸ್ಪತ್ರೆಗಳ ವೈದ್ಯರು ಭಯಪಡುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತದಿಂದ ಮೂರು ಬಾರಿ ಸಭೆ ಕರೆದು ಕೋವಿಡ್ ಸೋಂಕಿತರನ್ನು ಸೇರಿಸಿಕೊಂಡು ಚಿಕಿತ್ಸೆ ನೀಡುವ ಮೂಲಕ ಸಹಕರಿಸಬೇಕೆಂದು ಕೋರಲಾಗಿದೆ. ಆದರೂ ಸಾರ್ವಜನಿಕ ರಿಂದ ಈ ಬಗ್ಗೆ ದೂರುಗಳು ಕೇಳು ಬರುತ್ತಿರುವುದು ನಿಜ. ಅದನ್ನು ಮತ್ತೊಮ್ಮೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳ ಲಾಗುವುದು ಎಂದ ಜಿಲ್ಲಾಧಿಕಾರಿಗಳು, ರ್ಯಾಪಿಡ್ ಆಂಟಿ ಜೆನ್ ಟೆಸ್ಟ್ ಕಿಟ್‍ಗಳ ಮೂಲಕ ಜಿಲ್ಲೆಯಲ್ಲಿ ಸೋಂಕಿತ ರನ್ನು ಪತ್ತೆ ಮಾಡಲಾಗುತ್ತಿದೆ. ಆದ ಕಾರಣ ನಮ್ಮಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿವೆ. ಆದರೆ ಅದೇ ಪ್ರಮಾಣದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗುತ್ತಿರುವುದೂ ಕಂಡು ಬರುತ್ತಿದೆ. ರಾಜ್ಯದ ಕೊರೊನಾ ಸೋಂಕಿತರ ಸಾವಿನ ಪ್ರಮಾಣಕ್ಕೆ ಹೋಲಿಸಿದ್ದಲ್ಲಿ ಮೈಸೂರು ಜಿಲ್ಲೆಯಲ್ಲಿ ಅಷ್ಟೆನೂ ಹೆಚ್ಚಿಗೆ ಆಗಿಲ್ಲ. ಆದರೂ ನಾವು ಸಾವಿನ ಪ್ರಮಾಣ ಕಡಿತಗೊಳಿಸಲು ಪ್ರಯತ್ನ ಮಾಡುತ್ತಿ ದ್ದೇವೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ನೀಡಿದರು. ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್‍ಸೇಠ್, ಬಿ.ಹರ್ಷ ವರ್ಧನ, ಅಶ್ವಿನ್‍ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ, ಎಸ್ಪಿ ಸಿ.ಬಿ.ರಿಷ್ಯಂತ್, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಸೇರಿದಂತೆ ಮತ್ತಿತರರು ಸಭೆಯಲ್ಲಿದ್ದರು.

Translate »