ನಾಳೆಯಿಂದ ಮ.ಬೆಟ್ಟ ದೇವಾಲಯ ಪ್ರವೇಶಕ್ಕೆ ಅನುಮತಿ
ಚಾಮರಾಜನಗರ

ನಾಳೆಯಿಂದ ಮ.ಬೆಟ್ಟ ದೇವಾಲಯ ಪ್ರವೇಶಕ್ಕೆ ಅನುಮತಿ

June 7, 2020

ಚಾಮರಾಜನಗರ, ಜೂ.6- ಜಿಲ್ಲೆಯ ಹನೂರು ತಾಲೂಕಿನ ಪವಿತ್ರ ಕ್ಷೇತ್ರ ಮಲೆ ಮಹದೇಶ್ವರ ದೇವಾಲಯದ ದರ್ಶನಕ್ಕೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿ, ಜೂ.8ರಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ಕೆಲ ಷರತ್ತುಗಳೊಂ ದಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ದೇವಾಲಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ ಹಾಗೂ ಭಕ್ತಾದಿಗಳೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ವ್ಯವಸ್ಥೆ ಮಾಡಬೇಕು. ದೇವಾ ಲಯದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್‍ನಿಂದ ತಪಾಸಣೆ ನಡೆಸಬೇಕು. ಭಕ್ತಾದಿಗಳು ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್ ನೀಡುವ ವ್ಯವಸ್ಥೆ ಮಾಡ ಬೇಕು. ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಎಲ್ಲಾ ಅಂಗಡಿಗಳು ಕೋವಿಡ್-19 ಮುಂಜಾ ಗ್ರತಾ ಕ್ರಮಗಳನ್ನು ಪಾಲಿಸುವ ಷರತ್ತಿನೊಂ ದಿಗೆ ವ್ಯಾಪಾರ, ವಹಿವಾಟು ನಡೆಸ ಬಹುದು. ಹೋಟೆಲ್‍ಗಳಲ್ಲಿ ಪಾರ್ಸಲ್ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಭಕ್ತಾದಿಗಳಲ್ಲಿ ಜ್ವರ, ನೆಗಡಿ, ಕೆಮ್ಮು ಅಥವಾ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರಿಗೆ ದೇವಾಲಯ ಪ್ರವೇಶವನ್ನು ನಿರ್ಬಂಧಿಸಿ, ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ಅಥವಾ ಜಿಲ್ಲಾ ಕಂಟ್ರೋಲ್ ರೂಂ ನಂ: 1077ಕ್ಕೆ ಮಾಹಿತಿ ನೀಡಬೇಕು. ದೇವಾಲಯದ ಸುತ್ತಮುತ್ತ ಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಸಾರ್ವಜನಿಕರು ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡುವ ಕುರಿತ ಅಂಶಗಳ ಫಲಕಗಳನ್ನು ದೇವಾಲಯದ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಬೇಕು. ಷರತ್ತುಗಳು ಉಲ್ಲಂ ಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಮತ್ತು ಐಪಿಸಿ ಸೆಕ್ಷನ್ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದೆ ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Translate »