ಹನೂರು, ಜು.19(ಸೋಮು)- ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್‍ನಿಂದ ಮೃತಪಟ್ಟ 171 ಜನರ ಕುಟುಂಬಸ್ಥರನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ವೈಯಕ್ತಿಕ ಪರಿಹಾರ ನೀಡುವುದರ ಮೂಲಕ ಆತ್ಮ ಸ್ಥೈರ್ಯದಿಂದ ಬದುಕುವಂತೆ ಧೈರ್ಯ ತುಂಬಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ತಾಲೂಕಿನ ಬಿದರಹಳ್ಳಿ, ಮಾರ್ಟಳ್ಳಿ, ಹೂಗ್ಯಂ, ಸತ್ಯಮಂಗಲ, ಮಾರಳ್ಳಿ ಹಾಗೂ ಈ ಭಾಗದ ಇನ್ನಿತರೆ ಗ್ರಾಮಗಳಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಕುಟುಂಬ ಸ್ಥರನ್ನು ಸೋಮವಾರ ಭೇಟಿ ಮಾಡಿ, ಸಾಂತ್ವನ ಹೇಳುವುದರ ಮೂಲಕ ವೈಯಕ್ತಿಕ ಪರಿ ಹಾರ ನೀಡಿ ಅವರು ಮಾತನಾಡಿದರು.
ಕೊರೊನಾ ಮೊದಲನೇ ಅಲೆಯಲ್ಲಿ ತಾಲೂಕಿನ ಜನತೆ ಸೋಂಕಿನ ಬಗ್ಗೆ ಭಯ ಭೀತರಾಗಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿದ್ದರು. ಹಾಗಾಗಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಕಡಿಮೆ ಇತ್ತು. ಆದರೆ, 2ನೇ ಅಲೆಯಲ್ಲಿ ಜನರು ಕೋವಿಡ್ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಪರಿಣಾಮ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಹೆಚ್ಚಾಯಿತು. ಈ ದಿಸೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ 171 ಜನರು ಕೋವಿಡ್ ನಿಂದ ಮೃತಪಟ್ಟಿದ್ದರು. ಹಾಗಾಗಿ ಕೆಪಿಸಿಸಿ ಸೂಚನೆ ಮೇರೆಗೆ ಸಾಂತ್ವನ ತಿಳಿಸುವ ಹಿನೆÀ್ನಲೆ ಕಳೆದ 20 ದಿನಗಳಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಳ್ಳಲಾಗಿದ್ದು, ಕೋವಿಡ್ ನಿಂದ ಮೃತಪಟ್ಟ ಎಲ್ಲಾ ಕುಟುಂಬಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.
ಪಟ್ಟಿಗೆ ಸೇರಿಸುವಂತೆ ಸೂಚನೆ: ಆರೋಗ್ಯ ಇಲಾಖೆ ನೀಡಿರುವÀ ಮಾಹಿತಿ ಪ್ರಕಾರ ತಾಲೂಕಿನಲ್ಲಿ 142 ಜನರು ಮೃಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಇನ್ನುಳಿ ದವರು ಮೈಸೂರು, ಬೆಂಗಳೂರು, ತಮಿಳು ನಾಡಿನ ಸೇಲಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 171 ಆಗಿದೆ. ಈ ಬಗ್ಗೆ ಜಿಲ್ಲಾ ಡಳಿತದ ಗಮನಕ್ಕೆ ಬಂದಿಲ್ಲ. ಈ ಸಂಬಂಧ ಮಾಹಿತಿ ಕಲೆ ಹಾಕಲಾಗಿದ್ದು, ತಾಲೂಕಿ ನಲ್ಲಿ ಕೊರೊನಾದಿಂದ ಮೃತಪಟ್ಟಿರುವ ಎಲ್ಲರನ್ನೂ ಪಟ್ಟಿಗೆ ಸೇರಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚಿಸ ಲಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಗಳಿಗೆ ಸರ್ಕಾರದಿಂದ ದೊರಕುವ ಪರಿಹಾರವನ್ನು ನೀಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್‍ನ ರಾಜ್ಯ ಕಾರ್ಯದರ್ಶಿ ಚೇತನ್ ದೊರೆರಾಜು, ತಾಲೂಕು ಯೂತ್ ಕಾಂಗ್ರೆಸ್ ಸದಸ್ಯ ಗುಂಡಾಪುರದ ಮಾದೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ತಾಪಂ ಮಾಜಿ ಅಧ್ಯಕ್ಷೆ ಶಾಂತಿ ಶಿವು, ಗ್ರಾಪಂ ಸದಸ್ಯ ರಾಮಲಿಂಗಂ, ಮುಖಂಡರಾದ ಮಣಿ, ಮಾದಯ್ಯ, ಫೈರೋಜ್ ಖಾನ್, ದೇವರಾಜು ಹಾಗೂ ಇನ್ನಿತರರಿದ್ದರು.