ಪೆರುಂಬಾಡಿ-ಮಾಕುಟ ರಸ್ತೆ: ಲಘು ವಾಹನ ಸಂಚಾರಕ್ಕೆ ಅವಕಾಶ
ಕೊಡಗು

ಪೆರುಂಬಾಡಿ-ಮಾಕುಟ ರಸ್ತೆ: ಲಘು ವಾಹನ ಸಂಚಾರಕ್ಕೆ ಅವಕಾಶ

July 7, 2018

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜೂನ್ ಎರಡನೇ ವಾರ ಸುರಿದ ಧಾರಾಕಾರ ಮಳೆಯಿಂದಾಗಿ ವಿರಾಜಪೇಟೆ ತಾಲೂಕಿನ ಕೊಣನೂರು-ಮಾಕುಟ ರಾಜ್ಯ ಹೆದ್ದಾರಿಯ ಲ್ಲಿರುವ ಪೆರುಂಬಾಡಿಯಿಂದ ಮಾಕುಟ್ಟವರೆಗಿನ ರಸ್ತೆ ಹಾಗೂ ಸೇತುವೆಗಳು ಮಣ್ಣು ಕುಸಿದು, ಮರಗಳು ಬಿದ್ದು ತುಂಬಾ ಹದಗೆಟ್ಟಿರುತ್ತದೆ.

ಈ ರಸ್ತೆಯಲ್ಲಿ ಪ್ರತಿನಿತ್ಯ ಲಘು ಹಾಗೂ ಭಾರೀ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕ ಜೀವಕ್ಕೆ ತೊಂದರೆ ಉಂಟಾ ಗುವ ಸಾಧ್ಯತೆ ಇರುವುದರಿಂದ ರಸ್ತೆ ದುರಸ್ತಿ ಮಾಡುವ ಕಾರ್ಯ ಪೂರ್ಣಗೊಳ್ಳುವವರೆಗೆ ಈ ರಸ್ತೆ ಮಾರ್ಗ ಎಲ್ಲಾ ರೀತಿಯ ವಾಹನ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಜುಲೈ 12 ರವರೆಗೆ ನಿಷೇಧಿಸಿ, ಬದಲಿ ಮಾರ್ಗ ವಾದ ಗೋಣಿಕೊಪ್ಪ-ಪೊನ್ನಂಪೇಟೆ-ಶ್ರೀಮಂಗಲ-ಕುಟ್ಟ ಮುಖಾಂತರ ಸಂಚ ರಿಸಲು ಸೂಚಿಸಲಾಗಿತ್ತು.

ಕೇರಳ ರಾಜ್ಯ ಹೆದ್ದಾರಿಯ ಮಾರ್ಗದ ಮಧ್ಯೆ ಇರುವ ಪೆರುಂಬಾಡಿಯಿಂದ ಮಾಕು ಟ್ಟವರೆಗಿನ ರಸ್ತೆ ಬದಿಯಲ್ಲಿ ಮಳೆ-ಗಾಳಿಗೆ ಬಿದ್ದ ಮರಗಳು ಹಾಗೂ ಅಪಾಯದ ಸ್ಥಿತಿ ಯಲ್ಲಿರುವ ಮರಗಳನ್ನು ಗುರುತಿಸಿ ಅರಣ್ಯ ಇಲಾಖೆ ಮುಖಾಂತರ ಕಡಿದು ಈ ಸ್ಥಳ ದಿಂದ ತೆರವುಗೊಳಿಸಲಾಗಿದೆ. ಅಲ್ಲದೆ, ಪೆರುಂ ಬಾಡಿ-ಮಾಕುಟ್ಟ ರಸ್ತೆಯಲ್ಲಿ ತಾತ್ಕಾಲಿಕ ಕಾಮಗಾರಿಗಳು, ರಕ್ಷಣಾ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡು ಪ್ರಸ್ತುತ ಲಘು ವಾಹನಗಳ ಸಂಚಾರಕ್ಕೆ ಯೋಗ್ಯವಾದ ರೀತಿಯಲ್ಲಿ ಪೂರ್ಣಗೊಳಿಸಲಾಗಿದೆ.

ಪ್ರಸ್ತುತ, ಪೆರಂಬಾಡಿ-ಮಾಕುಟ್ಟ ರಸ್ತೆಯಲ್ಲಿ ಉಂಟಾಗಿದ್ದ ಭೂಕುಸಿತ ಮತ್ತು ಬಿದ್ದ/ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳನ್ನು ತೆರವುಗೊಳಿಸಿರುವುದರಿಂದ ಮತ್ತು ಹಾನಿ ಗೀಡಾಗಿದ್ದ ರಸ್ತೆಯಲ್ಲಿ ತಾತ್ಕಾಲಿಕ ರಕ್ಷಣಾ ಕ್ರಮಗಳನ್ನು ಕೈಗೊಂಡಿರುವುದರಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5)ರಲ್ಲಿ ಪ್ರದತ್ತವಾದ ಅಧಿಕಾರದಂತೆ ಜೂನ್ 13 ರಂದು ಹೊರಡಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ಸಾರ್ವಜನಿಕರ ಮತ್ತು ಪ್ರಯಾಣಿಕರ ಸಂಚಾರದ ಹಿತದೃಷ್ಠಿಯಿಂದ ತಾತ್ಕಾಲಿಕವಾಗಿ ಎಲ್ಲಾ ತರಹೆಯ ವಾಹನ ಗಳ ಸಂಚಾರ ನಿಷೇಧಿಸಿರುವ ಪೆರುಂಬಾಡಿ ಯಿಂದ ಮಾಕುಟ್ಟವರೆಗಿನ ರಸ್ತೆಯಲ್ಲಿ ಜುಲೈ 7 ರಿಂದ ಅನ್ವಯಿಸುವಂತೆ ದ್ವಿಚಕ್ರ, ತ್ರಿ-ಚಕ್ರ ಮತ್ತು ನಾಲ್ಕು ಚಕ್ರದ ಲಘು ವಾಹನ ಗಳು ಮಾತ್ರ ಸಂಚರಿಸುವುದು. ಲಘು ವಾಹನ ಗಳು ಅರಣ್ಯ ಭಾಗದ 23 ಕಿ.ಮೀ. ರಸ್ತೆಯಲ್ಲಿ ಗರಿಷ್ಟ ಗಂಟೆಗೆ 30 ಕಿ.ಮೀ. ವೇಗ ಮೀರದಂತೆ ಹಾಗೂ ನಿಗಧಿತ ಅವಧಿಯಲ್ಲಿ ಈ ಪ್ರದೇಶವನ್ನು ಹಾದು ಹೋಗುವಂತೆ ಸಂಚರಿ ಸುವುದು. ಅರಣ್ಯ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಿ, ಈ ಷರತ್ತುಗಳಿಗೆ ಒಳಪಟ್ಟು ಕಡ್ಡಾಯ ವಾಗಿ ಪಾಲಿಸುವ ನಿಬಂಧನೆಗೆ ಒಳಪಡಿಸಿ, ಮುಂದಿನ ಆದೇಶದವರೆಗೆ ಪ್ರಯಾಣಿಕರ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

ಪೆರುಂಬಾಡಿ-ಮಾಕುಟ್ಟ ರಸ್ತೆಯಲ್ಲಿ ಈ ವಾಹನಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ತರಹೆಯ ವಾಹನಗಳು ಬದಲಿ ರಸ್ತೆ ಯಾದ ಗೋಣಿಕೊಪ್ಪ-ಪೊನ್ನಂಪೇಟೆ-ಶ್ರೀಮಂಗಲ-ಕುಟ್ಟ ಮಾರ್ಗವಾಗಿ ಸಂಚರಿಸ ಬಹುದಾಗಿರುತ್ತದೆ. ಅರಣ್ಯ ಪ್ರದೇಶದಲ್ಲಿ ಸಾರ್ವಜನಿಕರ/ ವಾಹನ ಸವಾರರ ಸುರಕ್ಷತೆಯ ದೃಷ್ಠಿ ಯಿಂದ ಈ ಆದೇಶ ಕಡ್ಡಾಯವಾಗಿ ಪಾಲನೆ ಗಾಗಿ ಆರಕ್ಷಕ, ಅರಣ್ಯ, ಪ್ರಾದೇಶಿಕ ಸಾರಿಗೆ ಇಲಾಖೆಯ ಸಿಬ್ಬಂದಿಗಳನ್ನು ತನಿಖಾ ಠಾಣೆಗೆ ನಿಯೋಜಿಸಲು ಹಾಗೂ ಆರಕ್ಷಕ, ಅರಣ್ಯ, ಲೋಕೋಪಯೋಗಿ ಇಲಾಖೆಯ ಮೊಬೈಲ್ ಪ್ಯಾಟ್ರೋಲಿಂಗ್ ತಂಡಗಳು ಪ್ರತಿನಿತ್ಯ (24×7 ಮಾದರಿಯಲ್ಲಿ) ಪಹರೆ ಕಾರ್ಯ ನಿರ್ವ ಹಿಸಲು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥ ರಿಗೆ ಸೂಚನೆ ನೀಡಲಾಗಿದ್ದು, ಸಾರ್ವಜನಿ ಕರು ಈ ಬಗ್ಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕೋರಿದ್ದಾರೆ.

Translate »