ಇಂದಿನಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಮೈಸೂರು

ಇಂದಿನಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

September 17, 2018

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರ ಮೇಲಿನ ಹೊರೆ ತಗ್ಗಿಸಲು ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2ರಿಂದ 3ರೂ.ನಷ್ಟು ಇಳಿಕೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾಳೆಯಿಂದ (ಸೆ.17) ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದೆ.

ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶವೊಂದೇ ಬಾಕಿ ಇದೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್
ಮೇಲಿನ ವ್ಯಾಟ್ ಕಡಿಮೆ ಮಾಡಿದ ಬೆನ್ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ತಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನ ಇಳಿಕೆ ಮಾಡಿದ್ದರು. ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‍ಗೆ 1 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದ್ದರು. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಡೀಸೆಲ್ ಹಾಗೂ ಪೆಟ್ರೋಲ್ ಪ್ರತಿ ಲೀಟರ್‍ಗೆ 2 ರೂಪಾಯಿ ಇಳಿಸಿದ್ದರು. ಇನ್ನು ರಾಜಸ್ಥಾನ ಸಿಎಂ ವಸುಂದರಾ ರಾಜೆ ಸಹ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‍ಗೆ 2.5 ರೂ.ಗೆ ಇಳಿಕೆ ಮಾಡಿದ್ದರು. ಹಾಗೆಯೇ ಕರ್ನಾಟಕದಲ್ಲಿ ಸಿಎಂ ಕುಮಾರಸ್ವಾಮಿ ಅವರು ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಇಳಿಕೆ ಮಾಡುತ್ತಾರಾ ಎಂದು ಜನತೆ ಕಾಯುತ್ತಿದ್ದರು. ಇದೀಗ ಕುಮಾರಸ್ವಾಮಿ ಅವರು ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿರುವುದು ರಾಜ್ಯದ ಜನತೆಗೆ ಇನ್ನಿಲ್ಲದ ಸಂತೋಷವನ್ನುಂಟು ಮಾಡಿದೆ.

Translate »