ನವದೆಹಲಿ: ತೈಲ ಬೆಲೆ ಏರಿಕೆ ಹಾಗೂ ವ್ಯಾಟ್ ದರ ಇಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಪೆಟ್ರೋಲ್ ಬಂಕ್ ಹಾಗೂ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‍ಜಿ) ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ 5ನೇ ದಿನವೂ ಇಳಿಮುಖವಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಇಳಿಕೆಗೊಂಡಿವೆ. ದೇಶದ ಸರ್ಕಾರಿ ಸ್ವಾಮ್ಯದ ಕಂಪನಿಗಳು ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 30 ಪೈಸೆ ಮತ್ತು 27 ಪೈಸೆ ಇಳಿಸಿದೆ. ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ. 81.34 ಹಾಗೂ ಡೀಸೆಲ್ ಪ್ರತೀ ಲೀಟರ್ ಬೆಲೆ ರೂ.74.32 ಆಗಿದೆ.