ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ
ಹಾಸನ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ

May 30, 2018

ಬೇಲೂರು:  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತ ರನ್ನುದ್ದೇಶಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಐ.ಎನ್.ಅರುಣ್‍ಕುಮಾರ್ ಮಾತನಾಡಿ, ರಾಜ್ಯ ವಿಧಾನಸಭೆ ಚುನಾ ವಣೆ ಮುಗಿಯುವವರೆಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸದ ಕೇಂದ್ರ ಸರ್ಕಾರ ಚುನಾವಣೆ ಮುಗಿದ ನಂತರ ಇದ್ದಕ್ಕಿದ್ದಂತೆ ಯಾವುದೇ ಮುನ್ಸೂಚನೆ ನೀಡದೆ ದಿನ ದಿಂದ ದಿನಕ್ಕೆ ಬೆಲೆ ಏರಿಸುತ್ತಿದೆ. ಇದರಿಂದ ಸಾಮಾನ್ಯ ಜನರ ಮೇಲೆ ದೊಡ್ಡ ಪೆಟ್ಟು ಬೀಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಯಿಂದಾಗಿ ನಿತ್ಯದ ಜೀವನದಲ್ಲಿ ಆಟೋ ಚಾಲಕರು ಹಾಗೂ ಇನ್ನಿತರೆ ಪ್ರಯಾಣ ಕರ ವಾಹನಗಳ ಮಾಲೀಕರು ಪರದಾಡು ವಂತಾಗಿದೆ. ಅಲ್ಲದೆ ಸರಕು ಸಾಗಾಣ ಕೆ ಮೇಲೆ ವಾಹನಗಳ ಮಾಲೀಕರು ಹೆಚ್ಚು ಹಣ ವಸೂಲಿ ಮಾಡುತ್ತಿದ್ದು, ಜನರು ತೊಂದರೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ತಕ್ಷಣವೇ ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಿ ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಸೋಮೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರಾಧ್ಯಕ್ಷ ಲೋಕೇಶ್, ಕಾರ್ಯದರ್ಶಿ ಶ್ರೀವತ್ಸ, ಅಲ್ಪಸಂಖ್ಯಾತ ಘಟಕದ ಅಸ್ಲಂ, ಅಕ್ಮಲ್, ಆಟೋ ಘಟಕದ ಅಧ್ಯಕ್ಷ ಲಕ್ಷ್ಮಣ್, ಮುಖಂಡರಾದ ಜಯ ರಾಮ್, ಬಂಡೆಮಂಜು, ಸತೀಶ್, ರೆಹಮಾನ್, ಮುಜಮಿಲ್, ಶಬ್ಬೀರ್, ಜಮೃದ್, ಗಂಗಾಧರ್, ಪುಟ್ಟ ಇನ್ನಿತರರಿದ್ದರು.

Translate »