ಸಿಎಂ ಕುಮಾರಸ್ವಾಮಿ ವಿರುದ್ಧ  ಚಾರ್ಜ್‍ಶೀಟ್ ಸಲ್ಲಿಕೆಗೆ ಕೋರಿ ಪಿಐಎಲ್
ಮೈಸೂರು

ಸಿಎಂ ಕುಮಾರಸ್ವಾಮಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆಗೆ ಕೋರಿ ಪಿಐಎಲ್

February 15, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹರೀಶ್ ಹಳ್ಳಿ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಹೆಚ್‍ಡಿಕೆ ಮೇಲೆ ದೋಷಾರೋಪ ಪಟ್ಟಿ ಯಾಕೆ ಸಲ್ಲಿಕೆ ಮಾಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ರಿಜಿಸ್ಟ್ರಾರ್ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾವಣಗೆರೆಯ ಹರೀಶ್ ಹಳ್ಳಿ ಎಂಬುವರ ಸಲ್ಲಿಸಿದ್ದು, 2015ರಲ್ಲಿ ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ತನಿಖೆ ನಡೆಸುತ್ತಿದೆ. 2017ರಲ್ಲೆ ಚಾರ್ಜ್‍ಶೀಟ್ ಸಲ್ಲಿಸಲು ಎಸ್‍ಐಟಿ ಸಿದ್ಧವಿದ್ದರೂ ಇದುವರೆಗೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿಲ್ಲ. ಹೀಗಾಗಿ ಚಾರ್ಜ್‍ಶೀಟ್ ಹಾಕಬೇಕು ಎಂದು ಹೈಕೋರ್ಟ್ ಪಿಐಎಲ್ ಸಲ್ಲಿಕೆಯಾಗಿದೆ.

ಅರ್ಜಿಯಲ್ಲಿ ಏನಿದೆ?: ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಸಿಎಂ ಕುಮಾರ ಸ್ವಾಮಿ ಆರೋಪಿಯಾಗಿದ್ದು ಸಿಎಂ ವಿರುದ್ಧ ಐಪಿಸಿ ಸೆಕ್ಷನ್ 420, 465,467,468, 471 ಹಾಗೂ 120 (ಬಿ) ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕೇಸ್ ಆಗಿತ್ತು. ಸಿಎಂ ಕುಮಾರಸ್ವಾಮಿ ವಿರುದ್ಧ ಎಸ್‍ಐಟಿ ಅ. 2015 ಮತ್ತು ಜ.2017ರಂದು 2 ಎಫ್‍ಐಆರ್ ದಾಖಲು ಮಾಡಿದ್ದರು. ಹಾಗೆ ಮಾಧ್ಯಮಗಳ ವರದಿ ಪ್ರಕಾರ ಎಸ್‍ಐಟಿ ಚಾರ್ಜ್ ಶೀಟ್ ಸಿದ್ಧವಾಗಿದೆ. ಆದರೆ ಇಲ್ಲಿತನಕ ಎಸ್‍ಐಟಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿಲ್ಲ. ಸದ್ಯ ಸಿಎಂ ಆಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡದಂತೆ ಒತ್ತಡ ಹೇರಿದ್ದಾರೆ. ಅಕ್ರಮ ಮೈನಿಂಗ್ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಆರೋಪವಿದೆ. ಇಲ್ಲಿತನಕ ಯಾವುದೇ ನ್ಯಾಯಾ ಲಯ ತನಿಖೆಗೆ ಮಧ್ಯಂತರ ತಡೆ ನೀಡಿಲ್ಲ ಆದರೂ ಸಹ ಪ್ರಕರಣದ ತನಿಖೆಯನ್ನು ಎಸ್‍ಐಟಿ ಸಂಪೂರ್ಣವಾಗಿ ನಿಲ್ಲಿಸಿದೆ. ಆದಷ್ಟು ಬೇಗ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಲು ಸೂಚಿಸುವಂತೆ ಅರ್ಜಿಯಲ್ಲಿ ಹೈಕೋರ್ಟ್‍ಗೆ ಹರೀಶ್ ಹಳ್ಳಿ ಮನವಿ ಮಾಡಿದ್ದಾರೆ.

Translate »