ಕುರುಬ ಸಮುದಾಯ ಒಡೆಯುವ ಹುನ್ನಾರ
ಮೈಸೂರು

ಕುರುಬ ಸಮುದಾಯ ಒಡೆಯುವ ಹುನ್ನಾರ

December 2, 2020

ಬೆಂಗಳೂರು, ಡಿ.1(ಕೆಎಂಶಿ)- ಕುರು ಬರನ್ನು ಎಸ್‍ಟಿಗೆ ಸೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟದ ಹಿಂದೆ ಆರ್‍ಎಸ್‍ಎಸ್‍ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆ ಯುವ ಹುನ್ನಾರ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಟಿ ಹೋರಾಟದ ಹೆಸರಲ್ಲಿ ಕುರುಬ ಸಮುದಾಯವರನ್ನು ದಾರಿ ತಪ್ಪಿ ಸುವ ಕೆಲಸವಾಗುತ್ತಿದೆ. ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ನಾವು ಕರೆದರೂ ಕುರುಬರ ಎಸ್‍ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದ ರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ. ಅವರು ನನ್ನನ್ನು ಕರೆದಿಲ್ಲ. ಬರುತ್ತೇನೆ ಅಥವಾ ಬರು ವುದಿಲ್ಲ ಎಂದು ನಾನೂ ಅವರಿಗೆ ಹೇಳಿಲ್ಲ.. ಈಶ್ವರಪ್ಪ ಅವರು ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಆರೂವರೆ ವರ್ಷ ಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕುರುಬರು ಎಂದು ಕರೆದುಕೊಳ್ಳುವವರೂ ಅದರಲ್ಲಿ ಸೇರಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ. ಕೋಲಿ, ಗೊಲ್ಲ ಸಮುದಾಯವನ್ನೂ ಎಸ್ಟಿ ಪಟ್ಟಿಗೆ ಸೇರಿಸುವಂತೆ ಮಾಡಿರುವ ಶಿಫಾ ರಸು ಸಹ ನೆನೆಗುದಿಗೆ ಬಿದ್ದಿದೆ. ಈಶ್ವರಪ್ಪ ಅವರನ್ನು ಮುಂದೆ ಬಿಟ್ಟು ಆರ್‍ಎಸ್‍ಎಸ್ ಕುರುಬರ ಎಸ್‍ಟಿ ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತಿದೆ. ಇದು ಸಮುದಾಯ ವನ್ನು ದಾರಿ ತಪ್ಪಿಸುವ ಮತ್ತು ಗೊಂದಲ ನಿರ್ಮಾಣ ಮಾಡುವ ಪ್ರಯತ್ನ. ಹೋರಾಟ ತಪ್ಪು ಎಂದು ಹೇಳುವುದಿಲ್ಲ. 6 ವರ್ಷದಿಂದ ಸುಮ್ಮನಿದ್ದು ಈಗ ಹೋರಾಟಕ್ಕೆ ಕೈ ಹಾಕಿರುವು ದರ ಉದ್ದೇಶ ಏನು. ಹೋರಾಟದ ಹಿಂದೆ ಆರ್‍ಎಸ್‍ಎಸ್ ಇರುವುದರ ಮರ್ಮವೇನು? ಅವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧ. ಹೆಗಡೇವಾರ್, ಗೋಲವಾಲಕರ್ ಅವರು ಆರ್‍ಎಸ್‍ಎಸ್ ಸ್ಥಾಪಕರು. ಅವರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

Translate »