ಬೆಂಗಳೂರು: ಗ್ರಾಮ ಪಂಚಾಯತ್ ಮಟ್ಟ ದಲ್ಲೂ ಘನತ್ಯಾಜ್ಯ ನಿರ್ವಹಣೆಗೆ ನವೆಂ ಬರ್ ಅಂತ್ಯದೊಳಗೆ ಯೋಜನೆ ರೂಪಿಸು ವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾ ಯತ್‍ರಾಜ್ ಸಚಿವ ಕೃಷ್ಣಭೈರೇಗೌಡ ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಪಂಚಾಯತ್‍ನ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಅವರು, ನಗರ ಪ್ರದೇಶಗಳಲ್ಲಷ್ಟೇ ಸ್ವಚ್ಛತೆ ಕಾಪಾಡಿಕೊಂಡರೆ ಸಾಲದು ಗ್ರಾಮೀಣ ಭಾಗಗಳೂ ಸ್ವಚ್ಛವಾಗಿ ರಬೇಕು, ಪ್ರತಿ ತಾಲೂಕಿನ ಕನಿಷ್ಠ 5 ಅಥವಾ 6 ಗ್ರಾಮ ಪಂಚಾ ಯತ್‍ಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದರು. ಘನತ್ಯಾಜ್ಯ ನಿರ್ವಹಣೆಗೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳು, ಸಮುದಾಯ ಮುಖ್ಯಸ್ಥರು ಹಾಗೂ ಲಾಭ ಉದ್ದೇಶ ಇಲ್ಲದೆ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿರುವ ಸಂಘ ಸಂಸ್ಥೆಗಳ ಸಹಕಾರ ಪಡೆದುಕೊಳ್ಳುವಂತೆ ಸೂಚಿಸಿದರು.ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿ ಘೋಷಿಸುವಲ್ಲಿ ಶೌಚಾಲಯಗಳ ನಿರ್ಮಾಣ ಗುರಿ ಸಾಧಿಸಿದ ಪಂಚಾಯತ್‍ನ ಸಿಇಒಗಳನ್ನು ಅವರು ಅಭಿನಂದಿಸಿದರು.
ಹೆಚ್ಚುವರಿ ಶೌಚಾಲಯಗಳ ನಿರ್ಮಾಣಕ್ಕೆ ಬೇಡಿಕೆ ಬಂದಲ್ಲಿ ಪರಿಗಣಿಸಬಹುದಾಗಿದೆ. ಕೇಂದ್ರ ಸರ್ಕಾರದ ಅನುಮತಿಯೂ ಇದೆ ಎಂದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನ್‍ರೆಗಾ) ಅಡಿ ಹೆಚ್ಚು ಮಾನವ ದಿನಗಳನ್ನು ಸೃಷ್ಟಿಸುವಂತೆ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸೂಚಿಸಿದರು.