ಗಣರಾಜ್ಯೋತ್ಸವಕ್ಕೆ  ಪ್ಲಾಸ್ಟಿಕ್ ಧ್ವಜ ನಿಷೇಧ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಸೂಚನೆ
ಮೈಸೂರು

ಗಣರಾಜ್ಯೋತ್ಸವಕ್ಕೆ ಪ್ಲಾಸ್ಟಿಕ್ ಧ್ವಜ ನಿಷೇಧ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

January 21, 2022

ಮೈಸೂರು, ಜ.20(ಆರ್‍ಕೆ)-ಜನವರಿ 26ರಂದು ನಡೆಯಲಿರುವ ಗಣರಾಜ್ಯೋ ತ್ಸವ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಧ್ವಜ ಬಳಸದಂತೆ ಎಚ್ಚರ ವಹಿಸಬೇಕೆಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದ್ದಾರೆ.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಜನವರಿ 26ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಧ್ವಜ ಬಳಸದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಮಕ್ಕಳನ್ನು ಕರೆತರದೇ, ಕೇವಲ ಪೊಲೀಸ್ ಕವಾಯಿತಿಗೆ ಸೀಮಿತಗೊಳಿಸಬೇಕು. ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳಿ ರಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣದ ನಂತರ ಭಾಷಣ ಮಾಡಿದ ಮೇಲೆ ಪೊಲೀಸರಿಂದ ಗೌರವ ವಂದನೆ ಸಲ್ಲಿಸುವರು ಎಂದರು.

ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಿ ಕಡಿಮೆ ಅವಧಿಯಲ್ಲಿ ಕಾರ್ಯಕ್ರಮ ಮುಕ್ತಾಯಗೊಳ್ಳುವುದರಿಂದ ಸ್ವಚ್ಛತೆ, ಭದ್ರತೆ, ರಿಹರ್ಸಲ್ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಆಯುಕ್ತರು ಸಲಹೆ ನೀಡಿದರು.

ಜ.25ಕ್ಕೆ ರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಡಳಿತದ ವತಿಯಿಂದ ಜ.25ರಂದು ಬೆಳಗ್ಗೆ 10 ಗಂಟೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುವುದು ಎಂದು ಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತ್ ರೆಡ್ಡಿ ತಿಳಿಸಿದರು. ಕೋವಿಡ್ ನಿಯಮಗಳನ್ವಯ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು. ಅಂದು ಸಾಂಕೇತಿಕವಾಗಿ ಹೊಸದಾಗಿ ಸೇರ್ಪಡೆಗೊಂಡ ಯುವ ಮತದಾರರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದರು. ಸಮಾ ರಂಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಮತ್ತಿತರ ಗಣ್ಯರನ್ನು ಆಹ್ವಾನಿಸಲಾಗುವುದು. ರಾಷ್ಟ್ರೀಯ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಗುವುದು ಎಂದು ಹೇಳಿದರು. ಪಾಲಿಕೆ ಡೆಪ್ಯೂಟಿ ಕಮಿಷ್ನರ್ ಎಂ.ಕೆ.ಸವಿತಾ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಪ್ರೇಂ ಕುಮಾರ್, ಸಿಎಆರ್, ಡಿಸಿಪಿ ಶಿವರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ ಹಾಗೂ ಇತರರು ಸಭೆಯಲ್ಲಿ ಹಾಜರಿದ್ದರು.

Translate »