ಮೈಸೂರು, ಫೆ.16-ಜಯಲಕ್ಷ್ಮೀಪುರಂನ ಎಸ್‍ಬಿಆರ್‍ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್ ಕ್ರಾಸ್ ವತಿಯಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ಅಧಿಕಾರಿ ಡಾ.ದಿವಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜು ಪ್ರಾಂಶುಪಾಲ ಎಸ್.ವೆಂಕಟರಾಮು ಅಧ್ಯಕ್ಷತೆ ವಹಿಸಿದ್ದರು. ಸ್ವಚ್ಛ ಪÀರಿವರ್ತನಾ ಅಂಗವಾಗಿ ವಿದ್ಯಾರ್ಥಿಗಳು ‘ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತ’ ನಿರ್ಮಾಣ ಕ್ಕಾಗಿ ಪ್ರಮಾಣ ಸ್ವೀಕರಿಸಿದರು. ‘ನಮ್ಮ ಪರಿಸರವನ್ನು ಸ್ವಚ್ಛವಾಗಿರಿಸಿ, ಮಾಲಿನ್ಯವನ್ನು ತಡೆಗಟ್ಟಿ’ ಎಂಬ ಧ್ಯೇಯವಾಕ್ಯದೊಂದಿಗೆ ಜಾಥಾ ಪ್ರಾರಂಭವಾಯಿತು. ಕಾರ್ಯಕ್ರಮ ವನ್ನು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ರಾಧಾ ಸಂಘಟಿಸಿದರು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರರು ಪಾಲ್ಗೊಂಡು ಸ್ವಚ್ಛತೆ ವiತ್ತು ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಯಶಸ್ವಿಯಾದರು ಮತ್ತು ಜಯಲಕ್ಷ್ಮೀಪುರಂ ಸುತ್ತಮುತ್ತ ಸ್ವಚ್ಛಗೊಳಿಸಿದರು.