ಪ್ರಧಾನಿ ಮೋದಿ ಸಂತಾಪ
ಮೈಸೂರು

ಪ್ರಧಾನಿ ಮೋದಿ ಸಂತಾಪ

December 30, 2019

ನವದೆಹಲಿ: ಪೇಜಾವರ ಮಠದ ಹಿರಿಯ ಯತಿಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪೇಜಾ ವರ ಶ್ರೀಗಳು ಮಾರ್ಗದರ್ಶಿ ಬೆಳ ಕಾಗಿ ಲಕ್ಷಾಂತರ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಓಂ ಶಾಂತಿ ಎನ್ನುವ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸರ್ಕಾರದ ಪರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀಗಳ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ, ಹಾಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ನಳಿನ್‍ಕುಮಾರ್‍ಕಟೀಲ್, ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ್, ಶೋಭಾ ಕರಂದ್ಲಾಜೆ, ಸಚಿವ ಸುರೇಶ್‍ಕುಮಾರ್, ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿಟಿ.ರವಿ, ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

Translate »