ಇಂದು ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್
ಮೈಸೂರು

ಇಂದು ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

May 11, 2020

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ (ಸೋಮ ವಾರ) ಮಧ್ಯಾಹ್ನ 3 ಗಂಟೆಗೆ ಎಲ್ಲ ರಾಜ್ಯ ಗಳ ಹಾಗೂ ಕೇಂದ್ರಾ ಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಲಾಕ್‍ಡೌನ್ ಜಾರಿಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ 5ನೇ ಬಾರಿಗೆ ವಿಡಿಯೋ ಮೂಲಕ ಸಭೆ ನಡೆಸಲಿದ್ದು, ಹಂತಹಂತವಾಗಿ ಆರ್ಥಿಕ ಚಟುವಟಿಕೆ ಪುನರ್ ಆರಂಭ, ಕೊರೊನಾ ನಿರ್ವಹಣೆ ಬಗ್ಗೆ ಪರಾಮರ್ಶೆ ನಡೆಸಲಿ ದ್ದಾರೆ. ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸೇರಿದಂತೆ ಗೃಹ ಮತ್ತು ಆರೋಗ್ಯ ಕಾರ್ಯದರ್ಶಿ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳಿನ ಸಭೆಯಲ್ಲಿ ರಾಷ್ಟ್ರದಾದ್ಯಂತ ಲಾಕ್‍ಡೌನ್ ಹಿಂತೆಗೆದು ಕೊಳ್ಳುವಿಕೆಯ ಮುಂದಿನ ಹಂತಗಳು, ಆರ್ಥಿಕ ಚಟುವಟಿಕೆ ಹೆಚ್ಚಳ, ಕಂಟೈನ್ ಮೆಂಟ್ ವಲಯಗಳಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಇರುವ ಹಾದಿ ಮತ್ತಿತರ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ವಲಸೆ ಕಾರ್ಮಿಕರ ಬಗ್ಗೆಯೂ ಗಮನಹರಿಸುವ ಸಾಧ್ಯತೆಯಿದೆ. ಇದರಿಂದಾಗಿ ಪ್ರಸ್ತುತ ಉತ್ಪಾದನೆ, ಕೈಗಾರಿಕಾ ಮತ್ತು ನಿರ್ಮಾಣ ಚಟುವಟಿಕೆಗಳ ಪೂರ್ಣ ಪ್ರಮಾಣದ ಪುನರಾರಂಭಕ್ಕೆ ತೊಂದರೆಯಾಗುತ್ತಿದೆ.

Translate »